Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ರಮಝಾನ್ ಉಪವಾಸ ಸಂದರ್ಭ ಮಧುಮೇಹಿಗಳು...

'ರಮಝಾನ್ ಉಪವಾಸ ಸಂದರ್ಭ ಮಧುಮೇಹಿಗಳು ಔಷಧಿಗಳನ್ನು ನಿರ್ಲಕ್ಷಿಸಬಾರದು’

ವಾರ್ತಾಭಾರತಿವಾರ್ತಾಭಾರತಿ30 May 2018 8:50 PM IST
share

ಬೆಂಗಳೂರು, ಮೇ 30: ಪವಿತ್ರ ರಮಝಾನ್ ಮಾಸದ ಉಪವಾಸದ ಸಂದರ್ಭ ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಯಾವುದೇ ಕಾರಣಕ್ಕೂ ನಿಮ್ಮ ಔಷಧಗಳನ್ನು ನಿರ್ಲಕ್ಷಿಸಬೇಡಿ. ಈ ವೇಳೆ ನಿಮ್ಮ ರಕ್ತದ ಗ್ಲೂಕೋಸ್ ಮಟ್ಟವನ್ನು ಸತತವಾಗಿ ಗಮನಿಸುತ್ತಿರಿ ಎಂದು ನೈಟಿಂಗೇಲ್ ಹೋಮ್ ಹೆಲ್ತ್ ಸರ್ವೀಸಸ್‌ನ ವೈದ್ಯ ಡಾ.ಶ್ವೇತಾ ಚೌಧರಿ ಮನವಿ ಮಾಡಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಉಪವಾಸ 15 ಗಂಟೆಗಳಿಗೂ ಹೆಚ್ಚಿನ ಅವಧಿಗೆ ವಿಸ್ತರಿಸಿದ್ದು, ರಮಝಾನ್‌ನ ಈ ಬೇಸಿಗೆ ಭಾರತದಲ್ಲಿ ಬಹಳಷ್ಟು ಸವಾಲಿನ ಸಮಯ. ಬೆಳಗಿನ ಸಹರಿ, ಸಂಜೆಯ ಇಫ್ತಾರ್ ವೇಳೆ ಸೇವಿಸಬೇಕಾದ ಆಹಾರ-ದ್ರವ ಪದಾರ್ಥಗಳ ಬಗ್ಗೆ ವೈದ್ಯರ ಸಲಹೆ ಪಡೆದರೆ ಸಕ್ಕರೆ ಮಟ್ಟವನ್ನು ನಿಭಾಯಿಸಲು ನೆರವಾಗಲಿದೆ ಎಂದು ಅವರು ಸಲಹೆ ಮಾಡಿದ್ದಾರೆ.

ಮಧುಮೇಹದಂತಹ ದೀರ್ಘಕಾಲದ ರೋಗಗಳನ್ನು ಎದುರಿಸುತ್ತಿರುವವರು 15 ಗಂಟೆಗಳ ಕಷ್ಟಕರವಾದ ಉಪವಾಸ ಸಂಕೀರ್ಣ ತೊಂದರೆಗಳನ್ನು ತಂದೊಡ್ಡಬಹುದು. ಈ ವೇಳೆ ತಮ್ಮ ಆರೋಗ್ಯವನ್ನು ಪರಿಗಣಿಸಿಕೊಂಡು ಯಾವುದೇ ಸಂಕೀರ್ಣ ತೊಂದರೆಗಳು ಉಂಟಾಗದಂತೆ ಉಪವಾಸವನ್ನು ಸಮತೋಲನಗೊಳಿಸಿಕೊಳ್ಳುವುದು ಮುಖ್ಯ ಎಂದು ಅವರು ಸೂಚಿಸಿದ್ದಾರೆ.

ದೀರ್ಘಕಾಲದ ಉಪವಾಸ ಅಥವಾ ಬಹಳ ಸಮಯದ ವರೆಗೆ ಆಹಾರ ಸೇವಿಸದೇ ಇರುವುದರಿಂದ ಮಧುಮೇಹಿಗಳಲ್ಲಿ ಹೈಪೊಗ್ಲಿಸಿಮಿಯ ಉಂಟಾಗುವ ಅಂದರೆ ರಕ್ತದ ಸಕ್ಕರೆ (ಗ್ಲೂಕೋಸ್) ಮಟ್ಟ 4 ಎಂಎಂಒಎಲ್/ಎಲ್‌ಗಿಂತಲೂ ಕಡಿಮೆಯಾಗುವ ಅಪಾಯದ ಸ್ಥಿತಿಯಲ್ಲಿ ಕಂಡುಬರುವ ಕೆಲ ಪ್ರಮುಖ ಲಕ್ಷಣಗಳಲ್ಲಿ ಅತಿಯಾದ ಬೆವರುವಿಕೆ, ಪದೇಪದೇ ಮೂತ್ರವಿಸರ್ಜನೆ, ಸುಸ್ತು ಮತ್ತು ತಲೆ ತಿರುಗುವುದು ಸೇರಿರುತ್ತವೆ.

ಈ ರೀತಿಯ ಯಾವುದೇ ಲಕ್ಷಣಗಳು ಕಂಡು ಬಂದಲ್ಲಿ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಾಮಾನ್ಯಮಟ್ಟಕ್ಕೆ ಬರುವಂತೆ ಮಾಡಲು, ರೋಗಿಗಳು ಕ್ಷಿಪ್ರಕಾರ್ಯವೆಸಗುವ ಶರ್ಕರಪಿಷ್ಠ (ಕಾರ್ಬೊಹೈಡ್ರೇಟ್)ಗಳಾದ ಸಿಹಿ ತಿಂಡಿಗಳು, ಸಕ್ಕರೆಯುಳ್ಳ ಪೇಯಗಳು ಅಥವಾ ಹಣ್ಣಿನ ರಸಗಳನ್ನು ಸೇವಿಸಲು ಸಲಹೆ ನೀಡಲಾಗುತ್ತದೆ. ಬಹಳಷ್ಟು ಪ್ರಮಾಣದಲ್ಲಿ ನೀರು ಮತ್ತು ದ್ರವ ಪದಾರ್ಥಗಳನ್ನು ಸೇವಿಸಲು ಹಾಗೂ ಸೂಕ್ತ ಪ್ರಮಾಣದಲ್ಲಿ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಲಾಗುತ್ತದೆ.

ನಿಮಗೆ ವಾಕರಿಕೆ, ಅತಿಯಾದ ಮೂತ್ರವಿಸರ್ಜನೆ, ತಲೆನೋವು, ತಲೆ ತಿರುಗುವುದು ಮತ್ತು ಸುಸ್ತು ಕಂಡು ಬಂದರೆ, ಪರಿಸ್ಥಿತಿ ಕೈಮೀರುವುದನ್ನು ತಡೆಯುವುದಕ್ಕಾಗಿ ತಕ್ಷಣ ವೈದ್ಯಕೀಯ ಸಲಹೆ ಪಡೆಯಿರಿ. ಯಾವುದೆ ಆಕಸ್ಮಿಕ ಸಂದರ್ಭಗಳಲ್ಲೂ ನಿಮ್ಮ ಆರೋಗ್ಯ ಮತ್ತು ಸೌಖ್ಯತೆಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X