ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು, ಮೇ 30: ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣವಾಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ಅಪಾರ್ಟ್‌ಮೆಂಟ್‌ನ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ತಲಘಟ್ಟಪುರದ ಮಲ್ಲಸಂದ್ರದಲ್ಲಿ ನಡೆದಿದೆ.
ನಗರದ ಮಲ್ಲಸಂದ್ರದ ಪುರವಂಕರ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ ಶೇಕ್ ಅಬುದ್ದೀನ್ (18) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಎಂದು ಪೊಲೀಸರು ಗುರುತಿಸಿದ್ದಾರೆ.
ಪಿಯುಸಿಯಲ್ಲಿ ಫೇಲಾಗಿದ್ದಕ್ಕೆ ಮನೆಯವರು ಬೈದು ಬೇರೆ ಕೋರ್ಸ್‌ಗೆ ಸೇರಿಸಲು ಮುಂದಾಗಿದ್ದರಿಂದ ನೊಂದ ಆತ, ಬುಧವಾರ ಮುಂಜಾನೆ 3ರ ವೇಳೆ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಅಪಾರ್ಟ್‌ಮೆಂಟ್‌ನ 10ನೇ ಮಹಡಿಯಿಂದ ಕೆಳಗೆ ಹಾರಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ತಲಘಟ್ಟಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Next Story