ಆದಿವಾಸಿ ಜನಾಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ
ಉಡುಪಿ, ಮೇ 30: ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ ಉಡುಪಿ ಜಿಲ್ಲೆಯಲ್ಲಿ 2016-17ನೇ ಮತ್ತು 2017-18ನೇ ಸಾಲಿನಲ್ಲಿ ಆದಿವಾಸಿ ಜನಾಂಗದ ಕೊರಗ ವಿದ್ಯಾರ್ಥಿಗಳು ಏಳನೇ ತರಗತಿ ಮತ್ತು ಎಸೆಸೆಲ್ಸಿ ಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾದವರಿಗೆ ಕ್ರಮವಾಗಿ ರೂ. 2500 ಹಾಗೂ ರೂ. 5000 ವಿಶೇಷ ಪ್ರೋತ್ಸಾಹ ಧನ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಉಡುಪಿ ಇವರ ಪ್ರಕಟಣೆ ತಿಳಿಸಿದೆ.
Next Story





