ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಉಡುಪಿ, ಮೇ 30: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಕುಕ್ಕಿಕಟ್ಟೆ ಇಂದಿರಾನಗರ ನಿವಾಸಿ ಜಾನ್ ವೆಸ್ಲಿ ಸೋನ್ಸ್(80) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 29ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಸುನೀಲ್ ಕುಮಾರ್(42) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಮಧ್ಯಾಹ್ನ ವೇಳೆ ಪರ್ಪಲೆ ಬಳಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





