Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ವೇತನ ಪರಿಷ್ಕರಣೆಗೆ...

ಚಿಕ್ಕಮಗಳೂರು: ವೇತನ ಪರಿಷ್ಕರಣೆಗೆ ಒತ್ತಾಯಿಸಿ ಬ್ಯಾಂಕ್ ನೌಕರರ ಧರಣಿ

ವಾರ್ತಾಭಾರತಿವಾರ್ತಾಭಾರತಿ30 May 2018 10:55 PM IST
share
ಚಿಕ್ಕಮಗಳೂರು: ವೇತನ ಪರಿಷ್ಕರಣೆಗೆ ಒತ್ತಾಯಿಸಿ ಬ್ಯಾಂಕ್ ನೌಕರರ ಧರಣಿ

ಚಿಕ್ಕಮಗಳೂರು, ಮೇ 30: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದೇಶಾದ್ಯಂತ ಸಂಯುಕ್ತ ಬ್ಯಾಂಕ್ ಒಕ್ಕೂಟ ಹಾಗೂ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆಗಳು ಕರೆ ನೀಡಿರುವ ಮುಷ್ಕರ ಬೆಂಬಲಿಸಿ ನಗರದ ಗುರುನಾಥ ಸಿನೆಮಾ ಮಂದಿರದ ಎದುರಿನ ಕೆನರಾ ಬ್ಯಾಂಕ್ ಎದುರು ನಗರದ ವಿವಿಧ ಬ್ಯಾಂಕ್‍ಗಳ ನೌಕರರು ಬುಧವಾರ ಬ್ಯಾಂಕ್ ಕೆಲಸ ಸ್ಥಗಿತಗೊಳಿಸಿ ಧರಣಿ ನಡೆಸಿದರು.

ಕೆನರಾ ಬ್ಯಾಂಕ್ ಎದುರು ಬೆಳಗ್ಗೆ ಧರಣಿ ಆರಂಭಿಸಿದ ನಗರದ ವಿವಿಧ ಬ್ಯಾಂಕ್‍ಗಳ ನೌಕರರು ಹಾಗೂ ಸಿಬ್ಬಂದಿ ಕೇಂದ್ರ ಸರಕಾರ ಬ್ಯಾಂಕ್‍ಗಳ ಖಾಸಗೀಕರಣಕ್ಕೆ ಮುಂದಾಗಿದ್ದು, ನೌಕರರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದರು.

ಈ ವೇಳೆ ಧರಣಿ ನಿರತರನ್ನುದ್ದೇಶಿಸಿ ಮಾತನಾಡಿದ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಹಾಗೂ ಕೆನರಾ ಬ್ಯಾಂಕ್ ಸಿಬ್ಬಂದಿ ಬಸವರಾಜ್, ಕೇಂದ್ರ ಸರಕಾರ ಬ್ಯಾಂಕ್ ಸಿಬ್ಬಂದಿಗಳ ತುರ್ತು ವೇತನ ಪರಿಷ್ಕರಣೆ, ಎಲ್ಲ ಬ್ಯಾಂಕ್ ನೌಕರರಿಗೂ ನ್ಯಾಯ ಸಮ್ಮತ ವೇತನ ಹಾಗೂ ವೇತನ ಹೆಚ್ಚಳ ಮಾಡುವ ಭರವಸೆ ನೀಡಿದ್ದು, ಈ ಬಗ್ಗೆ ಇದುವರೆಗೂ ಯಾವುದೇ ಕ್ರಮ ವಹಿಸದೇ ಅನ್ಯಾಯ ಮಾಡಿದೆ ಎಂದು ಅಸಮಾದಾನ ವ್ಯಕ್ತಪಡಿಸಿದರು.

ಸಂಘದ ಜಿಲ್ಲಾಧ್ಯಕ್ಷ ಹಾಗೂ ಎಸ್‍ಬಿಐ ಬ್ಯಾಂಕ್ ಉದ್ಯೋಗಿ ರಮೇಶ್ ಮಾತನಾಡಿ, ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಹಿಂದೆ ಸಾಕಷ್ಟು ಪ್ರತಿಭಟನೆ, ಧರಣಿಗಳನ್ನು ಮಾಡಲಾಗಿದೆ. ಆದರೆ ಕೇಂದ್ರ ಸರಕಾರ ತಮ್ಮ ಯಾವ ಬೇಡಿಕೆಗೂ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ವೇತನ ಹೆಚ್ಚಳವಾಗದೇ ಬ್ಯಾಂಕ್ ಸಿಬ್ಬಂದಿ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ನೋಟ್ ಬ್ಯಾನ್‍ನಂತಹ ಕ್ರಮಗಳಿಂದಾಗಿ ಬ್ಯಾಂಕ್ ನೌಕರರ ಕೆಲಸ ದುಪ್ಪಟ್ಟಾಗಿದ್ದು, ಕೆಲಸಕ್ಕೆ ಸಮನಾದ ವೇತನ ನೀಡಲು ಸರಕಾರ ಹಿಂದುಮುಂದೆ ನೋಡುತ್ತಿದೆ. ನೌಕರರ ಸಂಘಟನೆಗಳ ಹಲವು ಮುಷ್ಕರಗಳಿಂದಾಗಿ ಕೇಂದ್ರ ಸರಕಾರ ಕೇವಲ 2% ವೇತನ ಹೆಚ್ಚಳ ಮಾಡಿದ್ದು, ಇದು ನೌಕರರ ಮೂಗಿಗೆ ತುಪ್ಪ ಹಚ್ಚಿದಂತಾಗಿದೆ. ಆದ್ದರಿಂದ ಕೇಂದ್ರ ಸರಕಾರ ಕೂಡಲೇ ಬ್ಯಾಂಕ್ ನೌಕರರ ಸಂಘಟನೆಗಳ ಎಲ್ಲ ಬೇಡಿಕೆಗಳನ್ನು ತುರ್ತಾಗಿ ಈಡೇರಿಸಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಈ ಮುಷ್ಕರ ಉಗ್ರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಸಿದರು.

ಚಿಕ್ಕಮಗಳೂರು ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಉಜ್ವಲ್ ಪಡುಬಿದ್ರಿ, ಪ್ರಧಾನ ಕಾರ್ಯದರ್ಶಿ ಹಾಲಪ್ಪ, ಜಯಪ್ರಕಾಶ್ ಸೇರಿದಂತೆ ಅನೇಕರು ಧರಣಿಯ ನೇತರತ್ವ ವಹಿಸಿದ್ದರು.

ಮುಷ್ಕರದಿಂದ ಗ್ರಾಹಕರ ಪರದಾಟ
ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಬ್ಯಾಂಕ್ ಸಿಬ್ಬಂದಿ ನಡೆಸಿದ ಮುಷ್ಕರದಿಂದಾಗಿ ನಗರದಲ್ಲಿ ಬ್ಯಾಂಕ್ ಗ್ರಾಹಕರು ಹಣಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಗ್ರಾಮೀಣ ಪ್ರದೇಶದ ಜನರು ಬ್ಯಾಂಕ್ ಬಂದ್ ಮಾಹಿತಿಯಿಲ್ಲದೇ ತಮ್ಮ ಅಗತ್ಯಕ್ಕೆ ಹಣ ಪಡೆಯಲು ಸಾಧ್ಯವಾಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ತುರ್ತು ಕೆಲಸಗಳಿಗೆ ಹಣ ಪಡೆಯಲು ಜನರು ಎಟಿಎಂಗಳ ಮುಂದೆ ಸಾಲುಗಟ್ಟಿನಿಂತಿದ್ದ ದೃಶ್ಯ ಸಮಾನ್ಯವಾಗಿತ್ತು. ಇನ್ನೂ ಕೆಲ ಎಟಿಎಂಗಳು ಕಾರ್ಯ ಸ್ಥಗಿತಗೊಂಡಿದ್ದರಿಂದ ಬ್ಯಾಂಕ್ ನೌಕರರಿಗೆ ಹಿಡಿಶಾಪ ಹಾಕುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X