ಹಾಸನ: ವಿಶ್ವ ತಂಬಾಕು ರಹಿತ ದಿನ; ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ

ಹಾಸನ,ಮೇ.31: ಜಿಲ್ಲಾ ಮಟ್ಟದ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ನಗರದಲ್ಲಿ ಜಾಗೃತಿ ಮೂಡಿಸುವ ಜಾಥಾವನ್ನು ನಡೆಸಲಾಯಿತು.
ನಗರದ ಎಂ.ಜಿ. ರಸ್ತೆ ಬಳಿ ಇರುವ ಹಾಸನಾಂಬ ಡೆಂಟಲ್ ಕಾಲೇಜು ಆವರಣದಲ್ಲಿ ಜಾಥಕ್ಕೆ ಚಾಲನೆ ನೀಡಿದರು. ತಂಬಾಕನ್ನು ಸಂಪೂರ್ಣ ತ್ಯಜಿಸುವಂತೆ ಇದೆ ವೇಳೆ ಘೋಷಣೆ ಕೂಗಿದರು. ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಜಗದೀಶ್, ಆರೋಗ್ಯಾಧಿಕಾರಿ ವೆಂಕಟೇಶ್, ಜಿಲ್ಲಾ ಸರ್ಜನ್ ಕೆ. ಶಂಕರ್ ಇತರರು ಪಾಲ್ಗೊಂಡಿದ್ದರು.
Next Story





