ಕುಂದಾಪುರ ಪುರಸಭೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಉಡುಪಿ, ಮೇ 31: ಕುಂದಾಪುರ ಪುರಸಭೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಮುಂದುವರಿದ ಭಾಗವಾಗಿ ಹೊನ್ನನಕೇರಿ ರಸ್ತೆ 10ನೇ ವಾರ್ಡಿನಲ್ಲಿ ಸ್ವಚ್ಛತಾ ಕಾರ್ಯವನ್ನು ಆಯೋಜಿಸಲಾಯಿತು.
ಪುರಸಭಾ ಅಧ್ಯಕ್ಷೆ ವಸಂತಿ ಮೋಹನ್ ಸಾರಂಗ, ಉಪಾಧ್ಯಕ್ಷ ರಾಜೇಶ್ ಕಾವೇರಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿಠಲ ಕುಂದರ್, ಪುರಸಭಾ ಮುಖ್ಯಾಧಿಕಾರಿ ವಾಣಿ ವಿ. ಆಳ್ವ, ಪರಿಸರ ಅಭಿಯಂತರ ಮಂಜುನಾಥ ಶೆಟ್ಟಿ, ಹಿರಿಯ ಆರೋಗ್ಯ ನಿರೀಕ್ಷಕ ಶರತ್ ಎಸ್. ಖಾರ್ವಿ, ಪೌರ ಕಾರ್ಮಿಕರು ಹಾಗೂ ಉದ್ಯಮಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ವಾರ್ಡಿನ ಸಾರ್ವಜನಿಕ ರು ಭಾಗವಹಿಸಿದರು.
Next Story





