ಯಾವುದೇ ಕಾರಣಕ್ಕೂ ನಾವು ಭಯಪಡೆವು: ಡಿಸಿಎಂ ಡಾ.ಪರಮೇಶ್ವರ್

ಬೆಂಗಳೂರು, ಮೇ 31: ಕೇಂದ್ರ ಸರಕಾರ ಸಂವಿಧಾನಿಕ ಸಂಸ್ಥೆಗಳಾದ ಐಟಿ, ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಂತಹ ಬೆದರಿಕೆಗಳಿಗೆ ನಾವು ಯಾವುದೇ ಕಾರಣಕ್ಕೂ ಭಯಪಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬೆಂಬಲಕ್ಕೆ ಕಾಂಗ್ರೆಸ್ ಪಕ್ಷ ಬೆನ್ನೆಲುಬಾಗಿ ನಿಲ್ಲುತ್ತದೆ. ಸಿಬಿಐ ದುರ್ಬಳಕೆ ಮಾಡಿಕೊಳ್ಳುವುದು ಕೇಂದ್ರ ಸರಕಾರಕ್ಕೆ ಶೋಭೆಯಲ್ಲ ಎಂದು ಟೀಕಿಸಿದರು.
‘ಉಡುಪಿ, ದಕ್ಷಿಣ ಕನ್ನಡದಲ್ಲಿ ಸುರಿದ ಮಳೆ-ಅತಿವೃಷ್ಟಿಯಿಂದ ಉಂಟಾದ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ’
-ಡಾ.ಜಿ.ಪರಮೇಶ್ವರ್ ಉಪ ಮುಖ್ಯಮಂತ್ರಿ
Next Story





