ಜೂ.1 ರಂದು ಸಿಇಟಿ ಫಲಿತಾಂಶ
ಬೆಂಗಳೂರು, ಮೇ 31: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2018-19ನೆ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ(ಸಿಇಟಿ) ಫಲಿತಾಂಶವನ್ನು ಜೂ.1ರಂದು ಪ್ರಾಧಿಕಾರದ ಸಭಾಂಗಣದಲ್ಲಿ ಮಧ್ಯಾಹ್ನ 1ಕ್ಕೆ ಬಿಡುಗಡೆ ಮಾಡಲಿದೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಸರಕಾರದ ಪ್ರಧಾನ ಕಾರ್ಯದರ್ಶಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. ಹಾಗೂ ಮಧ್ಯಾಹ್ನ 3ಕ್ಕೆ ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ಹಾಗೂ http://cet.kar.nic.in, http://karresults.nic.in ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
Next Story