ವಿಶ್ವಕರ್ಮ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ
ಉಡುಪಿ, ಜೂ.1: ರಾಷ್ಟ್ರೀಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಕುಂಜಿಬೆಟ್ಟು ಇದರ ವತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿ ರುವ ಸ್ವಸಮಾಜದ ಉಡುಪಿ ತಾಲೂಕಿನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2017-18ರಲ್ಲಿ 9ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇ.60 ಅಧಿಕ ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಕುಂಜಿಬೆಟ್ಟಿನ ಶ್ರೀಗಾಯತ್ರಿ ಕಲ್ಯಾಣ ಮಂಟಪ ಅಥವಾ ಉಡುಪಿಯ ಕನಕದಾಸ ಜುವೆಲ್ಲರ್ಸ್ ಇಲ್ಲಿಂದ ಪಡೆದು ಭರ್ತಿ ಮಾಡಿ ಜೂ.20 ರೊಳಗೆ ಹಿಂತಿರುಗಿಸುವುದು. ಹೆಚ್ಚಿನ ಮಾಹಿತಿಗಾಗಿ ಮೊ-9448748397, 9844902935ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Next Story





