‘ಹಣ ಬಿಡುಗಡೆಗೆ ಮುಖ್ಯಮಂತ್ರಿಯ ಅನುಮೋದನೆ ಪಡೆಯತಕ್ಕದ್ದು’
ಬೆಂಗಳೂರು, ಜೂ. 1: ಚಾಲ್ತಿಯಲ್ಲಿರುವ ಕಾರ್ಯಕ್ರಮಗಳಿಗೆ ಹಣ ಬಿಡುಗಡೆಗೆ ಮೊದಲು ಮುಖ್ಯಮಂತ್ರಿಯವರ ಪೂರ್ವಾನುಮೋದನೆ ಪಡೆಯತಕ್ಕದ್ದು ಎಂದು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ ಅವರು ಸುತ್ತೋಲೆಯನ್ನು ಹೊರಡಿಸಿದ್ದಾರೆ.
2018-19ನೆ ಸಾಲಿಗೆ ಅಧಿಕಾರಕ್ಕೆ ಬಂದಿರುವ ಹೊಸ ಸಂಯುಕ್ತ ಸರಕಾರದ ಆದ್ಯತೆ, ಗುರಿ ಮತ್ತು ಉದ್ದೇಶಗಳಿಗೆ ಅನುಗುಣವಾಗಿ ಪ್ರಸಕ್ತ ಸಾಲಿನ ಆಯವ್ಯಯ ಪತ್ರವನ್ನು ಹೊಸದಾಗಿ ಮಂಡಿಸುವ ಹಿನ್ನೆಲೆಯಲ್ಲಿ ಮುಂದಿನ ಆದೇಶದ ವರೆಗೆ ಎಲ್ಲ ಮುಂದುವರೆದ ಯೋಜನೆಗಳಿಗೆ ಲೇಖಾನುದಾನ ಪಡೆದಿರುವುದು ಮಿತಿಗಿಂತ ಹೆಚ್ಚಿನ ಅನುದಾನ ನೀಡಬಾರದು. ಯಾವುದೇ ಹೊಸ ಯೋಜನೆಗೆ ಮುಂದಿನ ಆದೇಶದವರೆಗೆ ಅನುಮೋದನೆ ನೀಡಬಾರದು. ಮೇಲ್ಕಂಡ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ಅವರು ಸುತ್ತೋಲೆಯಲ್ಲಿ ಸೂಚನೆ ನೀಡಲಾಗಿದೆ.
Next Story





