Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸಿಬಿಯಲ್ಲಿ ಯಾವುದೆ ಬದಲಾವಣೆ...

ಎಸಿಬಿಯಲ್ಲಿ ಯಾವುದೆ ಬದಲಾವಣೆ ಮಾಡುವುದಿಲ್ಲ: ಹೈಕೋರ್ಟ್‌ಗೆ ಸ್ಪಷ್ಟನೆ ನೀಡಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ1 Jun 2018 8:37 PM IST
share
ಎಸಿಬಿಯಲ್ಲಿ ಯಾವುದೆ ಬದಲಾವಣೆ ಮಾಡುವುದಿಲ್ಲ: ಹೈಕೋರ್ಟ್‌ಗೆ ಸ್ಪಷ್ಟನೆ ನೀಡಿದ ಸರಕಾರ

ಬೆಂಗಳೂರು, ಜೂ.1: ಭ್ರಷ್ಟಾಚಾರ ನಿಗ್ರಹದಳ(ಎಸಿಬಿ) ವಿಷಯಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಸರಕಾರದ ನಿರ್ಧಾರಕ್ಕೆ ಈಗಿನ ಸಮ್ಮಿಶ್ರ ಸರಕಾರವೂ ಬದ್ಧವಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.

ಎಸಿಬಿ ರಚನೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಶ್ಯಾಮ್‌ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಮುಕ್ತಾಯಗೊಳಿಸಿತು.

ವಿಚಾರಣೆ ವೇಳೆ ರಾಜ್ಯ ಸರಕಾರದ ಪರ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ, ಈ ಪ್ರಕರಣದಲ್ಲಿ ಹಿಂದೆ ಮಾಡಿರುವ ವಾದಕ್ಕೆ ಸರಕಾರ ಬದ್ಧವಾಗಿದೆ ಎಂದರು.

ಅರ್ಜಿದಾರ ಶಿವಕುಮಾರ ಎಚ್.ಫುಲ್ಸೆ ವಿರುದ್ಧದ ಪ್ರಕರಣದಲ್ಲಿ ಎಸಿಬಿ ಯಾವುದೇ ವರದಿ ಸಲ್ಲಿಸದಂತೆ ತಡೆ ನೀಡಬೇಕು ಎಂದು ವಕೀಲ ಎಂ.ಅರುಣ್ ಶ್ಯಾಮ್ ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈಗಾಗಲೇ ಯಾವುದೇ ಪ್ರಕ್ರಿಯೆ ಈ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂಬ ಮಧ್ಯಂತರ ಆದೇಶವಿದೆಯಲ್ಲಾ ಎಂದು ತಿಳಿಸಿತು.

ಅರ್ಜಿದಾರರ ಪರ ವಕೀಲರು, ಯಾವುದೇ ಹೆಚ್ಚಿನ ವಾದ ಮಂಡನೆ ಇಲ್ಲ ಎಂದು ತಿಳಿಸಿದ ಕಾರಣ, ಅಂತಿಮ ತೀರ್ಪು ಕಾಯ್ದಿರಿಸುವುದಾಗಿ ನ್ಯಾಯಪೀಠ ತಿಳಿಸಿತು. ಎಸಿಬಿ ರಚನೆ ಮಾಡಿರುವುದು ಭ್ರಷ್ಟಾಚಾರ ನಿಗ್ರಹ ಕಾಯ್ದೆಗೆ ವಿರುದ್ಧವಾಗಿದೆ. ಹೀಗಾಗಿ, ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗಳನ್ನು ಪುನಃ ಲೋಕಾಯುಕ್ತಕ್ಕೆ ವರ್ಗಾಯಿಸಬೇಕು ಎಂದು ಕೋರಿ ಸಮಾಜ ಪರಿವರ್ತನಾ ಸಮುದಾಯ ಮತ್ತು ಬೆಂಗಳೂರು ವಕೀಲರ ಸಂಘ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿವೆ.

ಅಂತೆಯೇ ಎಸಿಬಿ ದಾಖಲಿಸಿರುವ ಎಫ್‌ಐಆರ್ ಪ್ರಶ್ನಿಸಿದ ಒಟ್ಟು 11 ಅರ್ಜಿಗಳ ವಿಚಾರಣೆಯನ್ನೂ ಇವುಗಳ ಜೊತೆಗೇ ನಡೆಸಲಾಗಿದೆ. ಲೋಕಪಾಲ ಮಸೂದೆಯ ಅನುಸಾರ ಎಲ್ಲ ರಾಜ್ಯಗಳೂ ಲೋಕಾಯುಕ್ತ ಸಂಸ್ಥೆಯನ್ನು ಸ್ಥಾಪಿಸಬೇಕು ಹಾಗೂ ರಾಜಕಾರಣಿಗಳು ಮತ್ತು ಸರಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣಗಳನ್ನು ಲೋಕಾಯುಕ್ತ ಸಂಸ್ಥೆಯೇ ನಡೆಸಬೇಕು ಎಂಬುದು ಅರ್ಜಿದಾರರ ವಾದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X