ಡಿಸಿಎಂ ಹುದ್ದೆ ರದ್ದು ಕೋರಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

ಬೆಂಗಳೂರು, ಜೂ.1: ಸಂವಿಧಾನದಲ್ಲಿ ಡಿಸಿಎಂ ಹುದ್ದೆ ಇಲ್ಲದಿದ್ದರೂ ಡಾ.ಜಿ.ಪರಮೇಶ್ವರ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೀಗಾಗಿ, ಡಿಸಿಎಂ ಹುದ್ದೆಯನ್ನು ಕಾನೂನು ಬಾಹಿರವೆಂದು ಘೋಷಿಸಬೇಕೆಂದು ಮೈಸೂರಿನ ಡಾ.ಶೇಖರ್ ಅಯ್ಯರ್ ಎಂಬುವವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದಾರೆ.
ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಪ್ರತಿವಾದಿಗಳನ್ನಾಗಿ ಡಾ.ಜಿ.ಪರಮೇಶ್ವರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಹಾಗೂ ರಾಜ್ಯಪಾಲರ ಕಾರ್ಯದರ್ಶಿ ಅವರನ್ನು ಮಾಡಲಾಗಿದೆ.
Next Story





