ಧಾರವಾಡ ರೆಡ್‌ಕ್ರಾಸ್ ಸಂಸ್ಥೆ ಸಾಧನೆಗಾಗಿ ರಾಜ್ಯಪಾಲರಿಂದ ಪ್ರಶಸ್ತಿ

ಧಾರವಾಡ, ಜೂ.1: ಧಾರವಾಡ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿ ಇತ್ತೀಚೆಗೆ ಬೆಂಗಳೂರು ರಾಜಭವನದಲ್ಲಿ ನಡೆದ ರೆಡ್‌ಕ್ರಾಸ್ ಸಂಸ್ಥೆ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿವಾಲಾ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಡಾ.ವಿ.ಡಿ.ಕರ್ಪೂರಮಠ ಹಾಗೂ ಡಾ.ಶಶಿ ಪಾಟೀಲ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಸಂಸ್ಥೆ ಧಾರವಾಡಕ್ಕೆ ಸತತ ಮೂರು ವರ್ಷಗಳಿಂದ ಪ್ರಶಸ್ತಿ ಸಿಗುತ್ತಿದ್ದು ಬಹಳ ಸಂತೋಷದ ವಿಷಯ ಎಂದು ಧಾರವಾಡ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ.ಪುಷ್ಪಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





