Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ನೈರುತ್ಯ ಶಿಕ್ಷಕರ ಮತ್ತು...

ಮಡಿಕೇರಿ: ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ1 Jun 2018 11:21 PM IST
share
ಮಡಿಕೇರಿ: ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ

ಮಡಿಕೇರಿ ಜೂ.1: ಇದೇ ಜೂನ್ 8 ರಂದು ನಡೆಯುವ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.   

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ಚುನಾವಣೆ ಸಿದ್ಧತೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಮತದಾನವು ಜೂನ್ 8 ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಜಿಲ್ಲೆಯ ಸೋಮವಾರ ಪೇಟೆ ಪಟ್ಟಣ ಪಂಚಾಯತ್(ಸೋಮವಾರ ಪೇಟೆ ತಾಲೂಕಿನ ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ ಮತ್ತು ಶಾಂತಳ್ಳಿ ಹೋಬಳಿ), ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ(ಸೋಮವಾರ ಪೇಟೆ ತಾಲೂಕಿನ ಕುಶಾಲನಗರ ಮತ್ತು ಸುಂಟಿಕೊಪ್ಪ ಹೋಬಳಿ), ಮಡಿಕೇರಿ ನಗರಸಭೆ ಕಾವೇರಿ ಕಲಾ ಕ್ಷೇತ್ರ, ವಿರಾಜಪೇಟೆಯ ಪಟ್ಟಣ ಪಂಚಾಯತ್‍ಗಳಲ್ಲಿ ತಲಾ ಎರಡು (ನೈರುತ್ಯ ಶಿಕ್ಷಕರ ಮತಗಟ್ಟೆ ಎಡಭಾಗ)  ಮತ್ತು ಪದವೀಧರರ ಮತಗಟ್ಟೆ ಬಲಭಾಗ) ಮತಗಟ್ಟೆ ಸ್ಥಾಪಿಸಲಾಗಿದ್ದು, ಈ ಮತಗಟ್ಟೆ ಕೇಂದ್ರಗಳಲ್ಲಿ ಮತದಾನ ಮಾಡಬಹುದಾಗಿದೆ ಎಂದು ಹೇಳಿದರು. 

ಮತ ಎಣಿಕೆಯು ಮೈಸೂರಿನ ಮಹರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಜೂನ್ 12 ರಂದು ಬೆಳಗ್ಗೆ 8 ಗಂಟೆಗೆ ನಡೆಯಲಿದೆ. ನೈರುತ್ಯ ಶಿಕ್ಷಕರ ಮತ್ತು ಪದವೀಧರ ಕೇತ್ರದ ವ್ಯಾಪ್ತಿಲ್ಲಿ ಕೊಡಗು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕುಗಳು ಒಳಪಟ್ಟಿದ್ದು, ಮತದಾರರು ತಮ್ಮ ಮತಗಟ್ಟೆಗಳ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದರು. 

ನೈರುತ್ಯ ಪದವೀಧರರ ಕ್ಷೇತ್ರದಲ್ಲಿ ಕೊಡಗು ಜಿಲ್ಲೆಯಲ್ಲಿ ಒಟ್ಟು 1633 ಮತದಾರರಿದ್ದಾರೆ. ಇವರಲ್ಲಿ 947 ಪುರುಷರು ಮತ್ತು 686 ಮಹಿಳಾ ಮತದಾರರಿದ್ದಾರೆ. ಹಾಗೆಯೇ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 1250 ಮತದಾರರಿದ್ದು, 583 ಪುರುಷರು ಮತ್ತು 667 ಮಹಿಳಾ ಮತದಾರರು ಇದ್ದಾರೆ ಎಂದು ಎಂದು ಪಿ.ಐ.ಶ್ರೀವಿದ್ಯಾ ಅವರು ವಿವರಿಸಿದರು. 

ಜಿಲ್ಲೆಯ 8 ಮತಗಟ್ಟೆಗಳಲ್ಲಿ ಪ್ರತಿ ಮತಗಟ್ಟೆಗೆ 4 ರಂತೆ ಮತಗಟ್ಟೆ ಸಿಬ್ಬಂಧಿಗಳನ್ನು ಮತ್ತು ಪ್ರತಿ ಮತಗಟ್ಟೆಗೆ ಒಬ್ಬರಂತೆ ಮೈಕ್ರೋ ವೀಕ್ಷಕರ ಹಾಗೂ ಪ್ರತಿ ಮತಗಟ್ಟೆಗೆ ಒಬ್ಬರು ವಿಡಿಯೋ ಗ್ರಾಫರ್‍ನ್ನು ನೇಮಕ ಮಾಡಲಾಗಿದೆ ಎಂದರು.        

ನೈರುತ್ಯ ಪದವೀಧರರ  ಕ್ಷೇತ್ರಕ್ಕೆ ಒಟ್ಟು 8 ಜನ ಅಭ್ಯರ್ಥಿಗಳು ಹಾಗೂ ಶಿಕ್ಷಕರ ಕ್ಷೇತ್ರದಿಂದ ಒಟ್ಟು 12 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತದಾನದ ದಿನದಂದು ಮತಗಟ್ಟೆಯ 100 ಮೀಟರ್ ಅಂತರದಲ್ಲಿ ಯಾವುದೇ ಚುನಾವಣಾ ಪ್ರಚಾರ ಮಾಡುವಂತಿಲ್ಲ. ರಾಜಕೀಯ ಪಕ್ಷಗಳ ಚುನಾವಣಾ ಬೂತ್‍ನ್ನು ಮತಗಟ್ಟೆಯ 200 ಮೀಟರ್ ದೂರದಲ್ಲಿ ಸ್ಥಾಪಿಸಬೇಕು. ಚುನಾವಣಾ ಆಯೋಗದ ನಿರ್ದೇಶನದಂತೆ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮತದಾರರ ಬಲಗೈನ ಮಧ್ಯದ ಬೆರಳಿಗೆ ಹಾಗೂ ಪದವೀಧರರ ಕ್ಷೇತ್ರಕ್ಕೆ ಬಲಗೈನ ತೋರುಬೆರಳಿಗೆ ಶಾಯಿ ಹಾಕಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. 

ಮತದಾರರು ಚುನಾವಣಾಧಿಕಾರಿಗಳು ನಿಡುವ ನೇರಳೆ ಬಣ್ಣ ಸ್ಕೆಚ್ ಪೆನ್ನು ಮೂಲಕ ಪ್ರಾಶಸ್ತ್ಯ ಮತ 1,2,3 ಎಂದು ನಮೂದಿಸಬೇಕಿದೆ ಎಂದು ಅವರು ತಿಳಿಸಿದರು.  ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಬಗ್ಗೆ ಮತ್ತು ಭಾಗ ಸಂಖ್ಯೆ, ಕ್ರಮ ಸಂಖ್ಯೆಯ ಮಾಹಿತಿಯನ್ನು ಪಡೆದುಕೊಳ್ಳಲು ತಾಲ್ಲೂಕು ಕಚೇರಿಗಳಲ್ಲಿ ಮತದಾರರ ಮಾಹಿತಿ ಕೇಂದ್ರ ತೆರೆಯಲಾಗಿದೆ ದೂರವಾಣಿ ಮೂಲಕ ಮಾಹಿತಿ ಪಡೆಯಬಹುದಾಗಿದೆ ಎಂದರು. 

ದೂರವಣಿ ವಿವರ ಇಂತಿದೆ: ಮಡಿಕೇರಿ ತಾಲೂಕು ಕಚೇರಿ 08272-228396, ಸೋಮವಾರಪೇಟೆ ತಾಲ್ಲೂಕು ಕಚೇರಿ 08276-284044 ಮತ್ತು ವಿರಾಜಪೇಟೆ ತಾಲ್ಲೂಕು ಕಚೇರಿ 08274-257328 ಸಂಪರ್ಕಿಸಬಹುದಾಗಿದೆ ಎಂದರು. 

ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಸರ್ಕಾರಿ ನೌಕಕರು ಚುನಾವಣಾ ಪ್ರಚಾರದಲ್ಲಿ ತೊಡಗುವುದು ನಿಯಮಬಾಹಿರವಾಗಿದೆ. ಆದ್ದರಿಂದ ಪದವಿ ಪೂರ್ವ ಶಿಕ್ಷಣ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ, ಅನುದಾನಿತ ಕಾಲೇಜು ಉಪನ್ಯಾಸಕರು ಮತ್ತು ಶಾಲೆಗಳ ಶಿಕ್ಷಕರು ಯಾವುದೇ ಪ್ರತಿಸ್ಪರ್ಧಿ ಅಥವಾ ರಾಜಕೀಯ ಪಕ್ಷಗಳ ಪರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. 

ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆ ಸಂಬಂಧ ಪ್ಲೈಯಿಂಗ್ ಸ್ಕ್ವಾಡ್ ತಂಡವನ್ನು ನಿಯೋಜಿಸಲಾಗಿದ್ದು, ಟಿ.ಎನ್.ಜೀವನ್ ಕುಮಾರ್(ಮಡಿಕೇರಿ ತಾಲ್ಲೂಕು ಗ್ರಾಮಾಂತರ), ಪಿ.ಲಕ್ಷ್ಮಿ (ಮಡಿಕೇರಿ ನಗರ), ಸುನಿಲ್ ಕುಮಾರ್ (ಸೋಮವಾರ ಪೇಟೆ ತಾಲ್ಲೂಕು ಗ್ರಾಮಾಂತರ), ಧರ್ಮರಾಜು (ಕುಶಾಲನಗರ ಪಟ್ಟಣ), ಜಯಣ್ಣ (ವಿರಾಜಪೇಟೆ ತಾಲ್ಲೂಕು ಗ್ರಾಮಾಂತರ), ಲಕ್ಷ್ಮಿಕಾಂತ್ (ವಿರಾಜಪೇಟೆ ನಗರ) ಇವರನ್ನು ನಿಯೋಜಿಸಲಾಗಿದೆ. 

ಚುನಾವಣೆ ಸಂಬಂಧ 4 ಜೀಪು, ತಲಾ ಒಂದು ಮ್ಯಾಕ್ಸಿಕ್ಯಾಬ್ ಸೇರಿದಂತೆ ಒಟ್ಟು 6 ವಾಹನ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X