ದ.ಕ.ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘಕ್ಕೆ ಆಯ್ಕೆ
ಮಂಗಳೂರು, ಜೂ.2: ದ.ಕ.ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆಯು ನಿವೃತ್ತ ಪೊಲೀಸ್ ಅಧೀಕ್ಷಕ ಮಿತ್ರ ಹೆರಾಜೆ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. ಮುಖ್ಯ ಅತಿಥಿಗಳಾಗಿ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ, ಮಂಗಳೂರು ನಗರ ಪೊಲೀಸ್ ಆಯುಕ್ತ ವಿಫುಲ್ ಕುಮಾರ್ ಭಾಗವಹಿಸಿದ್ದರು. ಸಭೆಯಲ್ಲಿ ನಿವೃತ್ತ ಡಿವೈಎಸ್ಪಿ ವಿಶ್ವನಾಥ ಪಂಡಿತ್, ನಿವೃತ್ತ ಕಮಾಂಡೆಂಟ್ ರಾಮದಾಸ ಗೌಡ, ನಿವೃತ್ತ ಎಸಿಪಿ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.
2018-2020ನೆ ಸಾಲಿಗೆ ಸಂಘದ ಅಧ್ಯಕ್ಷರಾಗಿ ಹರಿಶ್ಚಂದ್ರ ಪಿ., ಗೌರವಾಧ್ಯಕ್ಷರಾಗಿ ಟಿಸಿಎಂ ಶರೀಫ್, ಉಪಾಧ್ಯಕ್ಷರಾಗಿ ವಿಶ್ವನಾಥ ಪಂಡಿತ್, ಸಂತೋಷ್ ಕುಮಾರ್, ಕೋಶಾಧಿಕಾರಿಯಾಗಿ ವಿ. ಮುಹಮ್ಮದ್, ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಬೈಂದೂರು, ಜತೆ ಕಾರ್ಯದರ್ಶಿಗಳಾಗಿ ನಾರಾಯಣ ಮಣಿ, ಶೇಖರ್ ಅಮೀನ್ ಆಯ್ಕೆಯಾಗಿದ್ದಾರೆ.
Next Story





