ಜೂ.4: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಪುತ್ತೂರಿನಲ್ಲಿ ಕಾಂಗ್ರೆಸ್ ಧರಣಿ
ಪುತ್ತೂರು, ಜೂ. 2: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ವಿಪರೀತವಾಗಿ ಏರಿಸಿರುವ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಜೂ. 4ರಂದು ಇಲ್ಲಿನ ಮಿನಿವಿಧಾನ ಸೌಧದ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಅವರು ತಿಳಿಸಿದ್ದಾರೆ.
ಜೂ. 4ರಂದು ಬೆಳಗ್ಗೆ 10 ಗಂಟೆಗೆ ಧರಣಿ ಪ್ರತಿಭಟನೆ ನಡೆಯುವುದು. ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್,ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ಮತ್ತಿತರರು ಭಾಗವಹಿಸುವರು ಎಂದು ತಿಳಿಸಿರುವ ಅವರು ಪಕ್ಷದ ಪದಾಧಿಕಾರಿಗಳು ,ವಿವಿಧ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ವಿನಂತಿಸಿಕೊಂಡಿದ್ದಾರೆ.
Next Story





