ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ: ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನ
ಧಾರವಾಡ, ಜೂ.2: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ(CMEGP) ಯೋಜನೆಯು 2018-19ನೇ ಸಾಲಿಗೆ ಮುಂದುವರೆದಿದೆ, ಈ ಯೋಜನೆಯಡಿ ಗ್ರಾಮಾಂತರ ಪ್ರದೇಶದ ನಿರುದ್ಯೋಗ ಯುವಕ, ಯುವತಿಯರಿಗೆ ಕೈಗಾರಿಕೆ, ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ.
ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಯುವತಿಯರಿಗೆ ಜೂ.30ರ ವರೆಗೆ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ http://cmegp.kar.nic.in ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಪ್ರತಿಯೊಂದಿಗೆ ದಾಖಲಾತಿಗಳನ್ನು ದ್ವಿ-ಪ್ರತಿಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ವಿವರಗಳಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2322627, ಹುಬ್ಬಳ್ಳಿ ತಾಲೂಕು ಪಂಚಾಯತ್ ಕೈಗಾರಿಕಾ ವಿಸ್ತರಣಾಧಿಕಾರಿ ಶಿವಾನಂದ ಕಮ್ಮಾರ (ಮೊಬೈಲ್ ಸಂಖ್ಯೆ: 9902412428), ಧಾರವಾಡ ತಾಲೂಕು ಪಂಚಾಯತ್ ಕೈಗಾರಿಕಾ ವಿಸ್ತರಣಾಧಿಕಾರಿ ಮಂಜುನಾಥ ಹೊಸಮನಿ(ಮೊಬೈಲ್ ಸಂಖ್ಯೆ:9448759510) ಹಾಗೂ ಧಾರವಾಡದ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಸಿ.ಪಿ.ನಾರಾಯಣಕರ(ಮೊಬೈಲ್ ಸಂಖ್ಯೆ:9480825622)ರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.







