ಗೋಳಿಯಡ್ಕ: ಕಾರುಗಳ ಮಧ್ಯೆ ಅಪಘಾತ: ನಾಲ್ಕು ಮಂದಿಗೆ ಗಾಯ

ಕಡಬ, ಜೂ. 2: ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿಯಡ್ಕ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಹೈದರಾಬಾದ್ ಮೂಲದ ಕುಟುಂಬವೊಂದು ಬೆಂಗಳೂರಿನಿಂದ ಟೊಯೋಟಾ ಎಟಿಯೋಸ್ ಕಾರನ್ನು ಬಾಡಿಗೆಗೆ ಗೊತ್ತುಪಡಿಸಿ ಧರ್ಮಸ್ಥಳ ದರ್ಶನ ಮುಗಿಸಿಕೊಂಡು ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಗೋಳಿಯಡ್ಕ ಎಂಬಲ್ಲಿ ಮಡಿಕೇರಿ ಮೂಲದವರಿದ್ದ ಸ್ವಿಫ್ಟ್ ಕಾರು ವಾಹನವೊಂದನ್ನು ಓವರ್ಟೇಕ್ ಮಾಡುವ ಭರದಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ.
ಘಟನೆಯಲ್ಲಿ ಎರಡೂ ಕಾರಿನಲ್ಲಿದ್ದವರು ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





