ಧಾರವಾಡ: ವಿಶ್ವ ತಂಬಾಕು ರಹಿತ ದಿನಾಚರಣೆ; ಜಾಗೃತಿ ಕಾರ್ಯಕ್ರಮ

ಧಾರವಾಡ, ಜೂ.2: ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಇತ್ತೀಚೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜನಜಾಗೃತಿ ಜಾಥಾ ಜರುಗಿತು
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎಸ್.ಬಳ್ಳೊಳ್ಳಿ, ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಸ್ನೇಹಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆರ್.ಎಮ್.ದೊಡ್ಡಮನಿ ಸೇರಿದಂತೆ ಗಣ್ಯರು ಕಲಾಭವನದ ಆವ ಣದಲ್ಲಿ ಜಾಥಾಕ್ಕೆ ಚಾಲನೆ ನೀಡಿದರು.
ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ತಂಬಾಕಿನ ದುಷ್ಪರಿಣಾಮದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ನವನಗರ ಕ್ಯಾನ್ಸರ್ ಆಸ್ಪತ್ರೆಯ ತಜ್ಞ ವೈದ್ಯ ಡಾ.ಸಂತೋಷ ಚಿಕ್ಕರೆಡ್ಡಿ ಉಪನ್ಯಾಸ ನೀಡಿದರು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಗಿರಿಧರ ಕುಕನೂರು, ವಕೀಲರ ಸಂಘದ ಅಧ್ಯಕ್ಷ ಆರ್.ಯು.ಬೆಳ್ಳಕ್ಕಿ, ಡಾ.ವಿ.ಡಿ.ಕರ್ಪೂರಮಠ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿವರ್ಗ, ಆರೋಗ್ಯ ಇಲಾಖೆಯ ಎಲ್ಲ್ಲ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ತಾಲೂಕು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.







