ಈಜಿಪ್ಟ್: 2ನೇ ಅವಧಿಗೆ ಅಧ್ಯಕ್ಷರಾಗಿ ಅಲ್-ಸಿಸ್ಸಿ ಪ್ರಮಾಣ

ಕೈರೋ (ಈಜಿಪ್ಟ್), ಜೂ. 2: ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್-ಸಿಸ್ಸಿ ಶನಿವಾರ ಎರಡನೇ ನಾಲ್ಕು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು.
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅವರು ಪುನರಾಯ್ಕೆಯಾಗಿದ್ದರು.
ಸಂಸತ್ತಿನಲ್ಲಿ ಅವರು ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ರಾಜಧಾನಿ ಕೈರೋದಾದ್ಯಂತ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Next Story





