Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆ ಹಾನಿ ಪರಿಹಾರಕ್ಕೆ ಕ್ರಮವಹಿಸಿ:...

ಮಳೆ ಹಾನಿ ಪರಿಹಾರಕ್ಕೆ ಕ್ರಮವಹಿಸಿ: ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೆದ್ ಅಖ್ತರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Jun 2018 10:49 PM IST
share
ಮಳೆ ಹಾನಿ ಪರಿಹಾರಕ್ಕೆ ಕ್ರಮವಹಿಸಿ: ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೆದ್ ಅಖ್ತರ್ ಸೂಚನೆ

ಮಂಡ್ಯ, ಜೂ.3: ಮಳೆ ಹಾನಿ ಪರಿಹಾರಕ್ಕೆ ಅಗತ್ಯವಾದ ಹಣವನ್ನು ಜಿಲ್ಲೆಗಳಿಗೆ ನೀಡಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮಳೆಯಿಂದ ನಷ್ಟಕ್ಕೊಳಗಾದವರಿಗೆ ತ್ವರಿತ ರೀತಿಯಲ್ಲಿ ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಾವೆದ್ ಅಖ್ತರ್ ಅವರು ಸೂಚಿಸಿದ್ದಾರೆ.

ರವಿವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಮಳೆಯಿಂದ ಆಗುವ ಮುಂಜಾಗ್ರತಾ ಕ್ರಮಗಳ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ವಿವಿಧೆಡೆ ಮಳೆಯಿಂದ ಬಹಳಷ್ಟು ಪ್ರದೇಶಗಳಲ್ಲಿ ನಷ್ಟವಾಗಿದೆ. ಅತಿವೃಷ್ಠಿ ಸಮಯದಲ್ಲಿ ಅಧಿಕಾರಿಗಳು ಬಹಳ ಎಚ್ಚರದಿಂದ ಕೆಲಸ ನಿರ್ವಹಿಸಬೇಕು. ಸಂತ್ರಸ್ತ ಪೀಡಿತರಿಗೆ ತುರ್ತಾಗಿ ಪರಿಹಾರ ಕಲ್ಪಿಸಬೇಕು. ಅಧಿಕಾರಿಗಳು ದಿನದ 24 ಗಂಟೆಗಳೂ ಕಟ್ಟೆಚ್ಚರ ವಹಿಸಬೇಕು ಎಂದರು.

ಮಳೆ ಬರುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಿಡಿಲು-ಮಿಂಚಿನ ಬಗ್ಗೆ ಮಾಹಿತಿ ನೀಡಬೇಕು. ಪ್ರವಾಹ ವಿಕೋಪಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಕಂದಾಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು. ಕಳೆದ ವರ್ಷ ಯಾವ ಯಾವ ಕಡೆ ಮಳೆಯಿಂದ ಹೆಚ್ಚು ಅನಾಹುತಗಳಾಗಿವೆ ಅಲ್ಲಿ ಹೆಚ್ಚು ಅಗತ್ಯ ಕ್ರಮವಹಿಸಬೇಕು. ಒಣಗಿ ಹೋಗಿರುವ, ಮುರಿದು ಬೀಳುವ ಹಂತ ತಲುಪಿರುವ ಮರಗಳನ್ನು ಹಾಗೂ ಕೊಂಬೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದಲ್ಲಿ ತೆರವುಗೊಳಿಸಬೇಕು ಎಂದು ಅವರು ಹೇಳಿದರು.

ಪ್ರವಾಹ ಸಂದರ್ಭದಲ್ಲಿ ಜನಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಬೇಕಾದರೆ, ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಅಧಿಕಾರಿಗಳು ಸನ್ನದ್ಧರಿರಬೇಕು. ನೈಸರ್ಗಿಕ ವಿಪತ್ತಿನ ಪರಿಸ್ಥಿತಿಯನ್ನು ಎದುರಿಸಲು ರಕ್ಷಣಾ ತಂಡಗಳು ರಚಿಸಲು ಮುಂಜಾಗ್ರತಾ ಕ್ರಮವಹಿಸಬೇಕು. ಜಿಲ್ಲಾಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ದಿನದಲ್ಲಿ 24 ಗಂಟೆಗಳು ಕಾರ್ಯನಿರ್ವಹಿಸುವ ನಿಯಂತ್ರಣ ಕೊಠಡಿ ತೆರೆದು ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೇಮಿಸಬೇಕು ಎಂದು ಅವರು ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಮಾತನಾಡಿ, ಪ್ರಕೃತಿ ವಿಕೋಪಕ್ಕೆ ಹಾನಿಯಾದ ಸಂದರ್ಭದಲ್ಲಿ ಪರಿಹಾರ ನೀಡಲು 4.14 ಕೋಟಿ ಹಣ ಮೀಸಲಿದೆ. 2018 ಮಾರ್ಚ್‍ನಿಂದ ಇಲ್ಲಿಯವರೆಗೆ ಮಳೆಯಿಂದ 6 ಜನ ಮೃತಪಟ್ಟಿದ್ದು, 12 ಕುರಿ ಹಾಗೂ ಹಸು ಸಾವನ್ನಪ್ಪಿವೆ. 403 ಮನೆಗಳು ಹಾನಿಗೊಳಗಾಗಿದ್ದು, ಬಹಳಷ್ಟು ಜನರಿಗೆ ಪರಿಹಾರವನ್ನು ನೀಡಲಾಗಿದೆ. 103 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, 17 ಲಕ್ಷ ರೂ.ನಷ್ಟು ಬೆಳೆ ಹಾನಿಯಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣರಾಜು, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಾ ಸುಲೋಚನಾ, ಮಂಡ್ಯ ಉಪವಿಭಾಧಿಕಾರಿ ಚಿಂದಾನಂದ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರಾಜು, ತಹಶೀಲ್ದಾರ್ ಗಳು ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X