Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರಿಸರದ ಶೋಷಣೆ ಮನುಕುಲದ ಅವನತಿಗೆ ಕಾರಣ:...

ಪರಿಸರದ ಶೋಷಣೆ ಮನುಕುಲದ ಅವನತಿಗೆ ಕಾರಣ: ಶಾಸಕ ಸಿಟಿ ರವಿ

ವಾರ್ತಾಭಾರತಿವಾರ್ತಾಭಾರತಿ5 Jun 2018 10:54 PM IST
share
ಪರಿಸರದ ಶೋಷಣೆ ಮನುಕುಲದ ಅವನತಿಗೆ ಕಾರಣ: ಶಾಸಕ ಸಿಟಿ ರವಿ

ಚಿಕ್ಕಮಗಳೂರು, ಜೂ.5 ಮನುಷ್ಯ ತನ್ನ ಅವಶ್ಯಕತೆಗಳಿಗೆ ಮಿತಿ ಹಾಕಿಕೊಳ್ಳಬೇಕು. ಇಲ್ಲವಾದಲ್ಲಿ ಪ್ರಕೃತಿ ಶೋಷಣೆ ಹೆಚ್ಚಾಗುತ್ತದೆ. ಮನುಕುಲದ ಅವನತಿಗೂ ಕಾರಣವಾಗುತ್ತದೆ ಎಂದು ಶಾಸಕ ಸಿ.ಟಿ.ರವಿ ಎಚ್ಚರಿಸಿದರು.

ಮಂಗಳವಾರ ನಗರದ ಎಐಟಿ ಕಾಲೇಜಿ ಬಿಜಿಎಸ್ ಸಭಾಂಗಣದಲ್ಲಿ ಕಾಲೇಜು ವತಿಯಿಂದ ಏರ್ಪಡಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ  ಸಮಾರಂಭವನ್ನು ಗಿಡಕ್ಕೆ ನೀರೆರೆದು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ  ಆರ್ಥಿಕ ತಜ್ಞರು ದೇಶದ ಜಿಡಿಪಿ ದರವನ್ನು ಪ್ರಾಕೃತಿಕ ಸಂಪನ್ಮೂಲ ಆಧರಿಸಿ ನಿರ್ಧರಿಸುವುದಿಲ್ಲ. ಬದಲಾಗಿ ಮಾರುಕಟ್ಟೆ ಸಾಮರ್ಥ್ಯವನ್ನು ಆಧಾರದಲ್ಲಿಟ್ಟು ನಿರ್ಧರಿಸುತ್ತಾರೆ. ಪ್ರಕೃತಿಯಲ್ಲೇ ಬದುಕಿನ ಪಾಠವಿದೆ. ಮನುಷ್ಯ ಮತ್ತು ಪ್ರಕೃತಿ ಎರಡರ ಉಳಿವಿನ ಕೊಂಡಿ ಪ್ರಕೃತಿಯಲ್ಲೇ ಇದೆ. ಮನುಷ್ಯನ ದುರಾಸೆ ಹೆಚ್ಚಾಗಿ ಪ್ರಕೃತಿ ಮೇಲಿನ ದೌರ್ಜನ್ಯ ಹೆಚ್ಚಾದರೆ ಈ ಕೊಂಡಿ ಕಳಚಿ ಬೀಳುತ್ತದೆ ಎಂದರು.

ದುರಾಸೆ ಹೆಚ್ಚಾದಂತೆಲ್ಲ ಪ್ರಕೃತಿಯ ಒಡಲು ಬಗೆದ ಪರಿಣಾಮ ಎಷ್ಟೋ ನದಿಗಳು ಕಣ್ಮರೆ ಆಗಿವೆ. ಫಾರಂ ನಂ.53 ಬಂದ ಮೇಲೆ ನದಿ ಮೂಲಗಳನ್ನು ಗ್ರಾಂಟ್ ಮಾಡಲಾಯಿತು ಎಲ್ಲೆಡೆ ಕಾಫಿ, ಭತ್ತದ ಗದ್ದೆಗಳು ಬಂದು ನದಿಗಳು ನಾಪತ್ತೆಯಾದವು ಎಂದು ವಿಷಾಧಿಸಿದರು.

ಭಾರತದ ಪರಂಪರೆಯಲ್ಲಿ ಭೂಮಿಗೆ ಕೃತಜ್ಞತೆ ಸಲ್ಲಿಸುವುದನ್ನು ಕಲಿಸಲಾಗಿದೆ. ಇದು ವಿಶ್ವದ ಬೇರೆಲ್ಲೂ ಈ ರೀತಿ ಭೂಮಿಯನ್ನು ಸ್ಮರಿಸುವ ಪದ್ಧತಿ ಇಲ್ಲ. ಭಾರತದಲ್ಲಿ ಭೂಮಿಯನ್ನು ವಿಷ್ಣುವಿನ ಪತ್ನಿಗೆ ಹೋಲಿಸಲಾಗುತ್ತದೆ. ಭೂಮಿಗೆ ನಮಸ್ಕಾರ ಮಾಡಿ ನಮ್ಮನ್ನು ಕ್ಷಮಿಸು ಎಂದು ಹೇಳಿ ಮುಂದೆ ಹೆಜ್ಜೆ ಇಡುವ ಉತ್ತಮ ಸಂಸ್ಕೃತಿಯನ್ನು ನಮ್ಮಲ್ಲಿ ಮಾತ್ರ ಕಾಣಲು ಸಾಧ್ಯ ಎಂದರು.

ಈಗ ನಾವು ನಾಗರೀಕರೋ? ನಮ್ಮ ಪೂರ್ವಿಕರು ನಾಗರೀಕರೋ ಎಂದು ಯೋಚಿಸಬೇಕಾಗಿದೆ. ನಾನು ಹುಟ್ಟಿ ಬೆಳೆದ ಹಳಿಯೂರಿನಲ್ಲಿ ವರ್ಷಪೂರ್ತಿ ಹರಿಯುತ್ತಿದ್ದ ಬಿರಂಜಿ ಹಳ್ಳ ಈಗ ಮಳೆಗಾಲದ ಕೆಲವು ದಿನ ಮಾತ್ರ ಸಣ್ಣಗೆ ಹರಿಯುತ್ತದೆ. ಯಗಚಿ ನದಿ ಚರಂಡಿಯಂತಾಗಿದೆ. ಮನುಷ್ಯನ ದುರಾಸೆಗೆ ಕಡಿವಾಣ ಹಾಕದಿದ್ದರೆ ಯಾರೂ ಉಳಿಯಲು ಸಾಧ್ಯವಿಲ್ಲ. ಪರಿಸರದ ಒಟ್ಟಿಗೆ ನಾವು ಬದುಕಿ, ಬದುಕಲು ಬಿಡಬೇಕು. ಆಗ ನಾವು ಬದುಕಿ, ಪ್ರಕೃತಿಯನ್ನು ಉಳಿಸಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲ ಸಿ.ಟಿ.ಜಯದೇವ್ ಪ್ರಾಸ್ತಾವಿಕವಾಗಿ ಮಾತನಾಡಿ ಇಂದು ಭೂಮಿಗೆ ನಾವು ವಿಷ ಬಿತ್ತುತ್ತಿದ್ದೇವೆ. ಅದರಿಂದ ಉತ್ಪನ್ನವಾಗುವ ವಿಷವನ್ನೇ ನಾವು ಮತ್ತೆ ಸೇವಿಸುತ್ತಿದ್ದೇವೆ. ಇದು ದುರದೃಷ್ಟಕರ. ತಂತ್ರಜ್ಞಾನ ಬೆಳೆದಂತೆ ಪಕೃತಿಯನ್ನೂ ಉಳಿಸಿ, ಬೆಳೆಸುವುದು ನಮ್ಮ ಕರ್ತವ್ಯ ಎಂದರು.

ಪೂರ್ವಿಕರು ಭೂಮಿಗೆ ಪೂಜ್ಯ ಸ್ಥಾನ ನೀಡಿದ್ದಾರೆ. ನಾವು ಅದರ ಮೇಲೆ ದೌರ್ಜನ್ಯ ಎಸಗಿ ವಿನಾಶದ ಅಂಚಿಗೆ ಕೊಂಡೊಯ್ಯುತ್ತಿದ್ದೇವೆ. ಮನುಷ್ಯನ ಅಭಿವೃದ್ಧಿ ಜೊತೆಗೆ ಪ್ರಕೃತಿ ಸಮತೋಲನವನ್ನೂ ಕಾಪಾಡಬೇಕು. ಪ್ರಕೃತಿ ಉಳಿದರೆ ನಾವು, ನೀವು ಇಲ್ಲವಾದಲ್ಲಿ ಎಲ್ಲವೂ ಶೂನ್ಯ ಎಂದು ಎಚ್ಚರಿಸಿದರು.

ನಗರಸಭೆ ಸದಸ್ಯ ತಮ್ಮಯ್ಯ, ಮಾಜಿ ಅಧ್ಯಕ್ಷೆ ಕವಿತಾ ಶೇಖರ್, ಎಐಟಿ ಆಡಳಿತ ಮಂಡಳಿ ಸದಸ್ಯ ಮೋಹನ್ ಉಪಸ್ಥಿತರಿದ್ದರು. ಉಪನ್ಯಾಸಕ ಕಿರಣ್ ಸ್ವಾಗತಿಸಿ, ವಂದಿಸಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X