Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಜಿಲ್ಲಾ ಕಾರಾಗೃಹದಲ್ಲಿ...

ಚಿಕ್ಕಮಗಳೂರು: ಜಿಲ್ಲಾ ಕಾರಾಗೃಹದಲ್ಲಿ ವಿಶ್ವ ಪರಿಸರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ5 Jun 2018 10:57 PM IST
share

ಚಿಕ್ಕಮಗಳೂರು, ಜೂ.5: ಪ್ರಜಾಪಿತ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ಮತ್ತು ಜಿಲ್ಲಾ ಕಾರಾಗೃಹದ ಸಂಯುಕ್ತ ಆಶ್ರಯದಲ್ಲಿ ಇಂದು ಜಿಲ್ಲಾ ಕಾರಾಗೃಹದಲ್ಲಿ  ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಸೆಷನ್ ಮತ್ತು ಸತ್ರ ನ್ಯಾಯಾಧೀಶರಾದ ಪಿ.ಎನ್.ದೇಸಾಯಿಯವರು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡುತ್ತಾ, ಮಾನವನ ಬದುಕು ಆರೋಗ್ಯವಾಗಿರಲು ಪರಿಸರ ಅತೀ ಅವಶ್ಯಕ. ಸುಂದರವಾದ ಪರಿಸರದಿಂದ ಸುಂದರವಾದ ಬದುಕು ನಮ್ಮದಾಗುವುದು. ಆ ಕಾರಣ ನಾವೆಲ್ಲರೂ ಪರಿಸರ ಕಾಳಜಿಯನ್ನು ಅವಶ್ಯಕವಾಗಿ ಮಾಡಬೇಕಾಗಿದೆ. ಪರಿಸರಕ್ಕೆ ಧಕ್ಕೆ ತರುವ, ಹಾನಿಯುಂಟುಮಾಡುವ ಕೃತ್ಯಗಳಿಂದ ದೂರವಾಗಿರಬೇಕು. ಇಂದು ಪರಿಸರದ ವಿದ್ಯಮಾನಗಳು ಮಾನವನನ್ನು ವಿನಾಶದ ಕಡೆಗೆ ಕರೆದೊಯ್ಯುತ್ತಿವೆ. ಇಂತಹ ಸಂದರ್ಭದಲ್ಲಿ  ಪರಿಸರವನ್ನು ಉಳಿಸಿ, ಬೆಳಸಿ ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಬೇಕಾದ ಹೊಣೆಗಾರಿಕೆ ನಮ್ಮೆಲ್ಲರದು ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ರಾಜಯೋಗಿನಿ ಬಿ.ಕೆ.ಭಾಗ್ಯಕ್ಕ ಮಾತನಾಡುತ್ತಾ, ಇಂದು ನಾನಾ ರೀತಿಯ ಪರಿಸರ ಮಾಲಿನ್ಯವನ್ನು ಕಾಣುತ್ತಿದ್ದೇವೆ. ಇದಕ್ಕೆಲ್ಲಾ ಮಾನವನ ದುರಾಸೆ, ಸ್ವಾರ್ಥ, ವಿವೇಚನಾ ರಹಿತ ಸಂಪನ್ಮೂಲಗಳ ಬಳಕೆ ಕಾರಣವೆನಿಸಿದರೂ ಇದರ ಮೂಲ ಮಾನವನ ಮನಸ್ಸಿನ ಮಲಿನತೆ. ಮಾನವ ಪ್ರಕೃತಿಯ ಕೂಸು ನಿಜ. ಪ್ರಕೃತಿಯ ಸಂಪತ್ತನ್ನು ಬಳಸಿಕೊಂಡು ಬೆಳೆಯಬೇಕು. ಆದರೆ ಏನಾಗುತ್ತಿದೆ. ಪರಿಸರವನ್ನು ಬಲಿಕೊಟ್ಟು ಬೆಳೆಯುತ್ತಿದ್ದಾನೆ. ಇದು ನಮ್ಮನ್ನು ನಾವೇ ಅಂತ್ಯಗೊಳಿಸಿಕೊಳ್ಳುವತ್ತ ನಡೆಯುತ್ತಿದ್ದೇವೆ ಎಂದರೆ ತಪ್ಪಾಗದು. ಅದರಿಂದ ಇಂದು ಭೂಮಿಯನ್ನು ಹಸಿರುಗೊಳಿಸುವ ಮನಸ್ಸನ್ನು ಸ್ವಚ್ಛವಾಗಿಟ್ಟುಕೊಳ್ಳುವ ಅವಶ್ಯಕತೆ ಹಿಂದಿಗಿಂತ ಇಂದು ಹೆಚ್ಚಾಗಿದೆ. ಈ ದಿಶೆಯಲ್ಲಿ ನಾವೆಲ್ಲರೂ ಕಾರ್ಯಪ್ರವೃತ್ತರಾಗೋಣ ಎಂದು ಆಶಿಸಿದರು.  

ಕಾರಾಗೃಹದ ಆವರಣದಲ್ಲಿ ಹಣ್ಣಿನ ಗಿಡಗಳನ್ನು ಜಿಲ್ಲಾ ನ್ಯಾಯಾಧೀಶರು ಮತ್ತು ಅತಿಥಿಗಳು ನೆಟ್ಟು ನೀರುಣಿಸಿದರು. 

ಕಾರ್ಯಕ್ರಮದಲ್ಲಿ ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ನೆರವು ಪ್ರಾಧಿಕಾರದ ಬಸವರಾಜು ಚೆಂಗಟಿ, ನ್ಯಾವವಾದಿಗಳು, ಜನಪದ ಸಾಹಿತ್ಯ  ಪರಿಷತ್ತಿನ ಅಧ್ಯಕ್ಷರು ಆದ ಎಸ್.ಎಸ್.ವೆಂದಟೇಶ್, ಜೈಲು ಅಧೀಕ್ಷಕ ವಿಜಯಕುಮಾರ್ ಚೌವ್ಹಾಣ್, ಜೈಲು ಸಿಬ್ಭಂಧಿ, ಉಪನ್ಯಾಸಕ ಸಿ.ಹೆಚ್.ನಾಗರಾಜ್, ಹಾಗು ಬ್ರಹ್ಮಾಕುಮಾರೀಸ್ ಸದಸ್ಯರು, ಎಸ್‍ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿದ್ಯಾಲಯ ಉಜಿರೆಯ ವೈಧ್ಯ ವಿದ್ಯಾರ್ಥಿಗಳಾದ ಸೌಜನ್ಯ, ಅನಿತ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X