Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆ: ಬಿರುಸುಗೊಂಡ ಮುಂಗಾರು ಮಳೆ

ದ.ಕ. ಜಿಲ್ಲೆ: ಬಿರುಸುಗೊಂಡ ಮುಂಗಾರು ಮಳೆ

ವಾರ್ತಾಭಾರತಿವಾರ್ತಾಭಾರತಿ7 Jun 2018 8:26 PM IST
share

ಮಂಗಳೂರು, ಜೂ. 7: ಕಳೆದ ಕೆಲವು ದಿನಗಳಿಂದ ಮರೆಯಾಗಿದ್ದ ಮುಂಗಾರು ಮಳೆ ಗುರುವಾರ ಚುರುಕುಗೊಂಡಿದೆ. ರಾತ್ರಿಯಿಂದ ಸುರಿದ ಮಳೆಯು ಗುರುವಾರವೂ ಮುಂದುವರಿದು ಬಿರುಸುಗೊಂಡಿದೆ. ಗುರುವಾರ ಬೆಳಗ್ಗೆ 8:30ರ ವರೆಗೆ ವರದಿಯಾಗಿರು ಮಳೆ ವಿವರ ಹೀಗಿದೆ.

ಬಂಟ್ವಾಳದಲ್ಲಿ 12 ಮಿ.ಮೀ., ಬೆಳ್ತಂಗಡಿಯಲ್ಲಿ 10.7 ಮಿ.ಮೀ., ಮಂಗಳೂರಿನಲ್ಲಿ 16.3 ಮಿ.ಮೀ., ಪುತ್ತೂರಿನಲ್ಲಿ 16.5 ಮಿ.ಮೀ. ಹಾಗೂ ಸುಳ್ಯದಲ್ಲಿ 7.4 ಮಿ.ಮೀ. ಮಳೆಯಾಗಿದೆ. ಬುಧವಾರ ಬೆಳಗ್ಗಿನ ಮಲೆ ವಿವರದಂತೆ ಬಂಟ್ವಾಳ 3.5, ಬೆಳ್ತಂಗಡಿ 15.2, ಮಂಗಳೂರು 9.6, ಪುತ್ತೂರು 18.9 ಹಾಗೂ ಸುಳ್ಯ 5.4 ಮಿ.ಮೀ. ಮಳೆಯಾಗಿತ್ತು.

ಈ ಪೈಕಿ ಬೆಳ್ತಂಗಡಿ ಹಾಗೂ ಪುತ್ತೂರು ತಾಲೂಕುಗಳಲ್ಲಿ ಗುರುವಾರದ ಮಳೆಗೆ ಹೋಲಿಸಿದರೆ ಬುಧವಾರ ಹೆಚ್ಚಿನ ಮಳೆಯಾಗಿದೆ. ಕಳೆದ ತಿಂಗಳ 29ರಂದು ಕರ್ನಾಟಕದ ಕರಾವಳಿಗೆ ಪ್ರವೇಶಿಸಿದ ಮುಂಗಾರು ಜಿಲ್ಲೆಯಾದ್ಯಂತ ಭಾರೀ ಮಳೆಗೆ ನಾಲ್ಕು ಜೀವಗಳು ಬಲಿ ಪಡೆದುಕೊಂಡಿತ್ತು. ಅಪಾರ ಹಾನಿ ಸಹಿತ ಜನಜೀವನ ಅಸ್ತವ್ಯಸ್ತಗೊಳಿಸಿತ್ತು. ಜಿಲ್ಲಾಡಳಿತ ವರದಿಯಂತೆ ಆರು ಗಂಟೆಗಳ ಆ ಮಹಾ ಮಳೆಗೆ ದ.ಕ. ಜಿಲ್ಲೆಯಲ್ಲಿ 35 ಮನೆಗಳಿಗೆ ಸಂಪೂರ್ಣ ಹಾನಿಯಾಗಿದ್ದವು. 42 ಮನೆಗಳಿಗೆ ಬಹುತೇಕ ಹಾಗೂ 483 ಮನೆಗಳಿಗೆ ಸಣ್ಣ ಪುಟ್ಟ ಹಾನಿ ಸಹಿತ ಜಿಲ್ಲೆಯಲ್ಲಿ ಒಟ್ಟು 20 ಕೋಟಿ ರೂ.ಗೂ ಅಧಿಕ ನಷ್ಟ ಸಂಭವಿಸಿತ್ತು. ಅಲ್ಲದೆ ಎಡೆಬಿಡದೆ ಸುರಿದ ಮಳೆಗೆ ಮಂಗಳೂರು ನಗರದ ಪ್ರಮುಖ ರಸ್ತೆಗಳು ಹಾಗೂ ಹೆದ್ದಾರಿಗಳಲ್ಲಿ ಕೃತಕ ನೆರೆ ಉಂಟಾಗಿ ಜಿನಜೀವನ ಅಸ್ತವ್ಯಸ್ತಗೊಂಡಿತ್ತು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲೇ 215 ಮಿ.ಮೀ. ಮಳೆಯಾಗಿದ್ದು, 40 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿತ್ತು. ನಗರದ ಕೊಟ್ಟಾರ ಚೌಕಿ ರಾಷ್ಟ್ರೀಯ ಹೆದ್ದಾರಿ ಮತ್ತು ಪಂಪ್‌ವೆಲ್ ರಾಷ್ಟ್ರೀ ಹೆದ್ದಾರಿಗಳಲ್ಲಿ ಕೃತಕ ನೆರೆ ಉಂಟಾಗಿ ಬಸ್ಸು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಉಡುಪಿ ಹಾಗೂ ಸುರತ್ಕಲ್ ಕಾವೂರು ಮೊದಲಾದ ಕಡೆಗಳಿಂದ ಕೂಳೂರು ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರಿಗೆ ಆಗಮಿಸಿದ ಬಸ್ಸುಗಳು ಕೊಟ್ಟಾರ ಚೌಕಿಯಲ್ಲಿ ಉಂಟಾದ ಕೃತಕ ನೆರೆಗೆ ನಗರ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಪ್ರಯಾಣಿಕರು ಕೆಲವು ಗಂಟೆಗಳ ಕಾಲ ಪರದಾಡಬೇಕಾಯಿತು.

ಪ್ರಮುಖ ರಸ್ತೆಗಳನ್ನು ಸೇರು ಪಂಪ್‌ವೆಲ್‌ನಲ್ಲೂ ಬಿ.ಇಸಿ.ರೋಡ್, ಉಳ್ಳಾಲ ಕಡೆಯಿಂಗಳಿಂದ ಬರುವ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ನಗರದ ಪ್ರಮುಖ ರಸ್ತೆಗಳಲ್ಲಿ ಉಂಟಾದ ನೆರೆಗೆ ಆಟೊ ರಿಕ್ಷಾಗಳು ಬಂದ್ ಬಿದ್ದು ಪರಾದಾಡಿದ್ದವು. ದಿಢೀರ್ ಸುರಿದ ಈ ಮಹಾ ಮಳೆಗೆ ಜಿಲ್ಲಾಡಳಿತ ಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಿತ್ತು. ಇದರಿಂದಾಗಿ ವಿದ್ಯಾರ್ಥಿಗಳು ಕೂಡ ವಾಹನ ಸಂಚಾರವಿಲ್ಲದೆ ಪೋಷಕರು ತಮ್ಮ ಮಕ್ಕಳನ್ನು ಮನೆಗೆ ಕರೆ ತರಲು ಪರದಾಡಬೇಕಾಯಿತು.

ಮೇ 29ರಂದು ಸುರಿದ ಮಹಾ ಮಳೆಗೆ ಚರಂಡಿಗಳ ತ್ಯಾಜ್ಯಗಳು ತುಂಬಿರುವುದು ಮತ್ತು ರಾಜಕಾಲುವೆಗಳ ಒತ್ತುವರಿ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಆದರೂ ಜಿಲ್ಲಾಧಿಕಾರಿ ಆದೇಶದ ಬಳಿಕ ಮಂಗಳೂರು ಮಹಾನಗರ ಪಾಲಿಕೆಯು ರಾಜಕಾಲುವೆಗಳ ಒತ್ತುವರಿ ಕಾರ್ಯಾಚರಣೆಯನ್ನು ಆರಂಭಿಸಿದವು. ಅಲ್ಲದೆ, ನಗರದ ಕೆಲವು ರಸ್ತೆಗಳಲ್ಲಿನ ಚರಂಡಿಗಳಲ್ಲಿನ ತ್ಯಾಜ್ಯಗಳನ್ನು ತೆರವುಗೊಳಿಸುವ ಮೂಲಕ ನೀರು ಸರಾಗವಾಗಿ ಹರಿದು ಹೋಗಲು ಅನುವು ಮಾಡಿಕೊಡಲಾಗಿತ್ತು. ಇದೀಗ ಗುರುವಾರ ಚುರುಕು ಪಡೆದ ಮುಂಗಾರು ಮಳೆ ಮತ್ತೊಮ್ಮೆ ಪ್ರಾಣ-ಸೊತ್ತು ಹಾನಿ ಸಹಿತ ಜನಜೀವನವನ್ನು ಅಸ್ತವ್ಯವಸ್ತಗೊಳಿಸುವುದೇ ಎಂಬ ಆತಂಕ ಜನತೆಯನ್ನು ಕಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X