ಕಡಬ: ಮರಕ್ಕೆ ಢಿಕ್ಕಿಯಾದ ಕಾರು; ಚಾಲಕನಿಗೆ ಗಾಯ

ಕಡಬ, ಜೂ.7: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಓಮ್ನಿ ಕಾರೊಂದು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿಯಾದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಗುರುವಾರ ನಡೆದಿದೆ.
ಶಿವಮೊಗ್ಗದ ತೀರ್ಥಹಳ್ಳಿಯಿಂದ ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿ ಬಳಿಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಬಿಳಿನೆಲೆ ಸಿಪಿಸಿಆರ್ಐ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕ ತೀರ್ಥಹಳ್ಳಿ ನಿವಾಸಿ ಶಮಂತ್ ಗಾಯಗೊಂಡಿದ್ದು, ಸುಬ್ರಹ್ಮಣ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





