ಉಡುಪಿ: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಉಡುಪಿ, ಜೂ.7: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಘ, ವಕೀಲರ ಸಂಘ ಉಡುಪಿ ಮತ್ತು ಭಂಡಾರ್‌ಕಾರ್ಸ್ ಆರ್ಟ್ಸ್ ಸೈನ್ಸ್ ಕಾಲೇಜು ಕುಂದಾಪುರ ಇವರ ಆಶ್ರಯದಲ್ಲಿ ಜೂ.12ರಂದು ಬೆಳಗ್ಗೆ 9:30ಕ್ಕೆ ಭಂಡಾರ್ ಕಾರ್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಬಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕಾ ಟಿ. ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಪ್ರಾನ್ಸಿಸ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





