Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡ್ಡದಂಡ್ಕ ಹಲ್ಲೆ ಪ್ರಕರಣ : ಮಸೀದಿ-ಮದರಸ...

ಪಡ್ಡದಂಡ್ಕ ಹಲ್ಲೆ ಪ್ರಕರಣ : ಮಸೀದಿ-ಮದರಸ ವಿಚಾರಗಳ ಮಧ್ಯೆ ಅಲ್ಲ, ಕುಟುಂಬಗಳ ಮಧ್ಯೆ

ವಾರ್ತಾಭಾರತಿವಾರ್ತಾಭಾರತಿ8 Jun 2018 9:16 PM IST
share
ಪಡ್ಡದಂಡ್ಕ ಹಲ್ಲೆ ಪ್ರಕರಣ : ಮಸೀದಿ-ಮದರಸ ವಿಚಾರಗಳ ಮಧ್ಯೆ ಅಲ್ಲ, ಕುಟುಂಬಗಳ ಮಧ್ಯೆ

ಮೂಡುಬಿದಿರೆ, ಜೂ. 8: ಪಡ್ಡಂದಡ್ಕದಲ್ಲಿ ಜೂನ್.5ರಂದು ಎರಡು ಮುಸ್ಲಿಂ ಸಂಘಟನೆಗಳ ನಡೆದ ಹಲ್ಲೆ ಪ್ರಕರಣವು ಮಸೀದಿಯ ಆವರಣದಲ್ಲಿ ಅಲ್ಲ. ಮಸೀದಿ ಮತ್ತು ಮದರಸದ ವಿಚಾರವು ಅಲ್ಲ, ಸಂಘಟನೆಯ ವಿಚಾರವೂ ಅಲ್ಲ. ಎರಡು ಕುಟುಂಬಗಳ ಮಧ್ಯೆ ನಡೆದ ವಿಚಾರ ಹೊರತು ಇದರಲ್ಲಿ ಮಸೀದಿಯ ಜಮಾತಿನವರ ಪಾತ್ರವಿಲ್ಲ ಎಂದು ನೂರುಲ್ ಹುದಾ ಜುಮ್ಮಾ ಮಸೀದಿಯ ಕಾರ್ಯದರ್ಶಿ ಮಹಮ್ಮದ್ ಶಾಫಿ ಸ್ಪಷ್ಟ ಪಡಿಸಿದ್ದಾರೆ.

ಅವರು ಮೂಡುಬಿದಿರೆ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು. ನೂರುಲ್ ಹುಧಾ ಜುಮ್ಮಾ ಮಸೀದಿ ಹಾಗೂ ಅರೆಬಿಕ್ ಶಾಲೆಯು ಸುಮಾರು 83 ವರ್ಷಗಳಿಂದ ಸಮಸ್ತದ ಅಧೀನದಲ್ಲಿ ಕಾರ್ಯಚರಿಸುತ್ತಿದ್ದು, 8ವರ್ಷಗಳ ಹಿಂದೆ ಒಂದು ಪಂಗಡವು ಮದರಸದ ವಿಛಾರದಲ್ಲಿ ತಕರಾರು ಎತ್ತಿ ಘರ್ಷಣೆಗೆ ಎಡೆ ಮಾಡಿಕೊಟ್ಟಿದ್ದು ಈ ಬಗ್ಗೆ ವೇಣೂರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಬೆಳ್ತಂಗಡಿಯ ಉಚ್ಛ ನ್ಯಾಯಾಲಯದಲ್ಲಿ ಹಾಗೂ ಬೆಂಗಳೂರಿನ ಉಚ್ಛ ನ್ಯಾಯಾಲಯದಲ್ಲಿ ಪ್ರಕರಣಗಳು ದಾಖಲಾಗಿದ್ದು ಉಚ್ಛ ನ್ಯಾಯಾಲಯವು ಮಸೀದಿಯ ಆಡಳಿತ ಕಮಿಟಿಯ ಪರವಾಗಿ ತೀರ್ಪನ್ನು ನೀಡರುತ್ತದೆ. ತದ ನಂತರ ಘರ್ಷಣೆಗೆ ಕಾರಣರಾಗಿದ್ದ ಗುಂಪಿನ ನಾಯಕರಾದ ರೌಡಿಶೀಟರ್ ಪಿ.ಎಸ್. ಶಬೀರ್ ಮಸೀದಿಯ ಕಂಪೌಡ್‌ನ ಹತ್ತಿರವಿರುವ ಮನೆಯಲ್ಲಿ ಅನಧಿಕೃತವಾಗಿ ಮದರಸವನ್ನು ಸ್ಥಾಪಿಸಿ ಧರ್ಮವಿರೋಧಿ ಚಟುವಟಿಕೆಯನ್ನು ಮಾಡುತ್ತಿದ್ದಲ್ಲದೆ ಜೀವನ ನಿರ್ವಹಣೆಗಾಗಿ ಹಣ ಕಲೆಕ್ಷನ್ ಮಾಡುತ್ತಿದ್ದಾರೆಂದು ಆರೋಪಿಸಿದರು.

ಜೂನ್ 5ರಂದು ನಡೆದ ಘಟನೆಯು ಕುಟುಂಬದ ವಿಚಾರದಲ್ಲಿ ರೌಡಿಶೀಟರ್‌ಗಳಾದ ಶಬೀರ್ ಮತ್ತು ಆತನ ಬಾವ ರಹೀಂ ಮಧ್ಯೆ ನಡೆದಿದ್ದು ಮಸೀದಿಯ ಅರ್ಧ ಕಿ.ಮೀ ದೂರದಲ್ಲಿ ಇವರಿಬ್ಬರ ಮಧ್ಯೆ ಪರಸ್ಪರ ಮಾತಿನ ಚಕಮಕಿ ನಡೆದಿದ್ದು, ತಡರಾತ್ರಿ ರಹೀಂ ಮನೆಗೆ ಶಬೀರ್ ಮತ್ತು ಅವರ ತಂಡವು ಮನೆಗೆ ನುಗ್ಗಿ ದಾಂಧಲೆ ಮಾಡಿದ್ದು ಈ ಬಗ್ಗೆ ಜೊತೆ ಕಾರ್ಯದರ್ಶಿ ಬಶೀರ್ ಅವರಿಗೆ ನೆರೆಕರೆಯವರು ಫೋನ್ ಮಾಡಿದ್ದು ಆಗ ಬಶೀರ್ ಅವರು ಸ್ಥಳಕ್ಕೆ ಬಂದು ನೋಡಿದಾಗ ಘಟನೆ ನಡೆದಿತ್ತು. ಈ ವಿಚಾರವನ್ನು ಅವರು ಮಸೀದಿಯ ಅಧ್ಯಕ್ಷರಾದ ಯು.ಕೆ ಮಹಮ್ಮದ್ ಅವರಿಗೆ ತಿಳಿಸಿದರು. ಮಹಮ್ಮದ್ ಅವರು ಸ್ಥಳಕ್ಕೆ ಆಗಮಿಸಿದಾಗ ರೌಡಿಶೀಟರ್ ಶಬೀರ್‌ನ ತಂಡ ಏಕಾಏಕಿ ದಾಳಿ ನಡೆಸಿದ್ದು ಘರ್ಷಣೆಗೆ ಕಾರಣ ಅದಲ್ಲದೆ ಪಿ.ಎಸ್ ಶಬೀರ್ ಅವರ ಹೆಂಡತಿಗೆ ಮಾನಭಂಗಕ್ಕೆ ಯತ್ನ ಎಂಬ ಆರೋಪ ಸುಳ್ಳು ಎಂದು ತಿಳಿಸಿದರು.

ಊರಿನಲ್ಲಿ ಹಿಂದೂ ಮುಸ್ಲಿಂರ ಮಧ್ಯೆ ಕೋಮು ಸಾಮರಸ್ಯವನ್ನು ಕದಡುವ ಮತ್ತು ಸದಾ ಸಮುದಾಯಗಳ ಮಧ್ಯೆ ಜಗಳವಾಡುತ್ತಿರುವ ಈ ಇಬ್ಬರು ರೌಡಿಶೀಟರ್‌ಗಳನ್ನು ಊರಿನಿಂದ ಗಡಿಪಾರು ಮಾಡಿದರೆ ಊರಿಗೆ ಉತ್ತಮ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಮಸೀದಿಯ ಅಧ್ಯಕ್ಷ ಹಾಜಿ ಯು.ಕೆ ಮಹಮ್ಮದ್, ಜೊತೆ ಕಾರ್ಯದರ್ಶಿ ಮಹಮ್ಮದ್ ಬಶೀರ್ ಹಾಗೂ ಸದಸ್ಯ ಬಶೀರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X