ಜೂ. 9: ಉಡುಪಿ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ರಜೆ ಘೋಷಣೆ
ಉಡುಪಿ, ಜೂ.8: ಉಡುಪಿ ಜಿಲ್ಲೆಯಾದ್ಯಂತ ನಿನ್ನೆಯಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ತಗ್ಗುಪ್ರದೇಶಗಳು ಜಲಾವೃತಗೊಂಡು ನೆರೆಯ ವಾತಾವರಣ ಇರುವುದರಿಂದ ಗ್ರಾಮೀಣ ಪ್ರದೇಶದಿಂದ ಬರುವ ವಿದ್ಯಾರ್ಥಿ ಗಳ ಸುರಕ್ಷತೆಯ ದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ ಜೂ.9 (ಶನಿವಾರ) ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.
ಹೆಚ್ಚಿನ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶಾಲೆ ತಲುಪುತಿದ್ದಂತೆ ರಜೆಯನ್ನು ನೀಡಿದರೆ, ಇನ್ನು ಕೆಲವು ಶಾಲಾ-ಕಾಲೇಜುಗಳಲ್ಲಿ ಪಾಠ-ಪ್ರವಚನಗಳು ಪ್ರಾರಂಭಗೊಂಡ ಬಳಿಕವಷ್ಟೇ ರಜೆಯ ಮಾಹಿತಿ ತಲುಪಿದ್ದರಿಂದ ಕೆಲವು ಗಂಟೆಗಳ ಪಾಠ ನಡೆದ ಬಳಿಕ ರಜೆಯನ್ನು ಸಾರಲಾಗಿತ್ತು.
Next Story





