ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡಲು ಬಿಜೆಪಿ ಆಗ್ರಹ

ಬೆಂಗಳೂರು, ಜೂ. 8: ಎಸ್ಸಿ-ಎಸ್ಟಿ ವರ್ಗದ ವಿದ್ಯಾರ್ಥಿಗಳ ಮಾದರಿಯಲ್ಲೆ ರಾಜ್ಯದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಣೆ ಮಾಡಬೇಕೆಂದು ಬಿಜೆಪಿ ಆಗ್ರಹಿಸಿದೆ.
2018-19ನೆ ಸಾಲಿನ ಬಜೆಟ್‌ನಲ್ಲಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಸರಕಾರ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಘೋಷಣೆ ಮಾಡಿತ್ತು. ಇಂದು ಗ್ರಾಮೀಣ ಪ್ರದೇಶಗಳಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು-ಪೋಷಕರು ಗೊಂದಲದಲ್ಲಿದ್ದಾರೆ. ಕೇವಲ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಮಾತ್ರ ಬಸ್ ಪಾಸ್ ನೀಡಲಾಗುತ್ತಿದೆ. ಇದನ್ನು ಕೂಡಲೇ ಕೈಬಿಟ್ಟು ಎಲ್ಲ ವರ್ಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಕ್ಷಣವೆ ಬಸ್‌ಪಾಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಆಗ್ರಹಿಸಿದ್ದಾರೆ.
Next Story





