Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ: ಪದವೀಧರ ಕ್ಷೇತ್ರಕ್ಕೆ ಶೇ....

ಶಿವಮೊಗ್ಗ: ಪದವೀಧರ ಕ್ಷೇತ್ರಕ್ಕೆ ಶೇ. 74.98, ಶಿಕ್ಷಕರ ಕ್ಷೇತ್ರಕ್ಕೆ ಶೇ. 82.80 ಮತದಾನ

ವಾರ್ತಾಭಾರತಿವಾರ್ತಾಭಾರತಿ8 Jun 2018 10:31 PM IST
share
ಶಿವಮೊಗ್ಗ: ಪದವೀಧರ ಕ್ಷೇತ್ರಕ್ಕೆ ಶೇ. 74.98, ಶಿಕ್ಷಕರ ಕ್ಷೇತ್ರಕ್ಕೆ ಶೇ. 82.80 ಮತದಾನ

ಶಿವಮೊಗ್ಗ, ಜೂ. 8: ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಚುನಾವಣಾ ಪ್ರಕ್ರಿಯೆ ಯಾವುದೇ ಗೊಂದಲ - ಗಡಿಬಿಡಿಗೆ ಆಸ್ಪದವಾಗದಂತೆ, ಬಹುತೇಕ ಶಾಂತಿಯುತವಾಗಿ ನಡೆಯಿತು. ಎರಡೂ ಕ್ಷೇತ್ರಗಳಲ್ಲಿ ಉತ್ತಮ ಮತದಾನವಾಗಿದೆ. ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದೆ. ಜೂ. 12 ರಂದು ಮತ ಎಣಿಕೆ ನಡೆಯಲಿದೆ. 

ಸುರಿಯುವ ಮಳೆಯ ನಡುವೆಯೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಟ್ಟಾರೆ ಪದವೀಧರ ಕ್ಷೇತ್ರಕ್ಕೆ ಶೇ. 76.98 ಹಾಗೂ ಶಿಕ್ಷಕರ ಕ್ಷೇತ್ರಕ್ಕೆ 82.80 ರಷ್ಟು ಮತದಾನವಾಗಿದೆ. ಸಾಕಷ್ಟು ಜಿದ್ದಾಜಿದ್ದಿ ಕೆರಳಿಸಿದ್ದ ಹಾಗೂ ಅಬ್ಬರದ ಪ್ರಚಾರಕ್ಕೆ ಸಾಕ್ಷಿಯಾಗಿದ್ದ ಎರಡೂ ಕ್ಷೇತ್ರಗಳಲ್ಲಿಯೂ, ಮಳೆಯ ನಡುವೆಯೂ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದೆ.

ಮತದಾನ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ, ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಸೋಲು - ಗೆಲುವಿನ ಲೆಕ್ಕಾಚಾರಗಳು ಬಿರುಸುಗೊಂಡಿದೆ. ಆಯಾ ಪಕ್ಷದ ನಾಯಕರು ಬೂತ್‍ಗಳಲ್ಲಿ ನಡೆದ ಮತದಾನದ ವಿವರ ಕಲೆ ಹಾಕುತ್ತಿದ್ದಾರೆ. ಯಾವ್ಯಾವ ಬೂತ್‍ಗಳಲ್ಲಿ ಎಷ್ಟೆಷ್ಟು ಮತ ಪಕ್ಷದ ಅಭ್ಯರ್ಥಿಗೆ ಸಂದಾಯವಾಗಿರಬಹುದು ಎಂಬುವುದರ ಮಾಹಿತಿ ಆಧಾರದ ಮೇಲೆ, ಪಕ್ಷದ ಅಭ್ಯರ್ಥಿಗಳ ಹಣೆ ಬರಹ ಏನಾಗಬಹುದೆಂಬ ತಮ್ಮದೆ ಆದ ಲೆಕ್ಕಾಚಾರ ನಡೆಸಲಾರಂಭಿಸಿದ್ದಾರೆ. 

ಬಿರುಸು: ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನಕ್ಕೆ ಚುನಾವಣಾ ಆಯೋಗ ವ್ಯವಸ್ಥೆ ಮಾಡಿತ್ತು. ಬೆಳಿಗ್ಗೆಯಿಂದಲೇ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ತುಂತುರು ಮಳೆಯಾಗುತ್ತಿದ್ದುದು ಮತದಾನದ ಮೇಲೆ ಪರಿಣಾಮ ಬೀರುವ ಆತಂಕ ಉಂಟಾಗಿತ್ತು. ಮಳೆಯ ಕಾರಣದಿಂದ ಬೆಳಿಗ್ಗೆಯ ವೇಳೆ ಮತದಾನದ ಪ್ರಮಾಣ ಕಡಿಮೆಯಾಗಿತ್ತು. ಆದರೆ ಆನಂತರ ಕೆಲ ಸಮಯ ಮಳೆಯ ಪ್ರಮಾಣ ಕಡಿಮೆಯಾಯಿತು. ಇದರಿಂದ ಮತದಾರರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು. 

ಆದರೆ ಕೆಲ ಮತದಾರರು ಮಳೆಯ ನಡುವೆಯೇ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದ ದೃಶ್ಯ ಕಂಡುಬಂದಿತು. ಕೆಲ ರಾಜಕೀಯ ಪಕ್ಷಗಳು ಮತದಾರರ ಮೊಬೈಲ್‍ಗೆ ಮತದಾರರ ಚೀಟಿಯಲ್ಲಿನ ಕ್ರಮ ಸಂಖ್ಯೆ, ಭಾಗ ಸಂಖ್ಯೆ, ಮತದಾನ ಮಾಡುವ ಮತಗಟ್ಟೆಯ ವಿವರದ ಮೆಸೇಜ್ ಕಳುಹಿಸಿದ್ದವು. ಇದರಿಂದ ಮತದಾರರು ನಿರ್ದಿಷ್ಟ ಮತಕೇಂದ್ರಕ್ಕೆ ತೆರಳಿ ಮತ ಚಲಾಯಿಸಲು ಸಹಾಯಕವಾಗುವಂತಾಗಿತ್ತು. 

ಪ್ರಮುಖರ ಮತದಾನ: ಶಿವಮೊಗ್ಗ ನಗರದಲ್ಲಿ ವಿಧಾನ ಪರಿಷತ್ ಸ್ಪೀಕರ್ ಡಿ.ಹೆಚ್.ಶಂಕರಮೂರ್ತಿ, ಶಾಸಕ ಕೆ.ಎಸ್.ಈಶ್ವರಪ್ಪ, ಶಾಸಕ ಕೆ.ಬಿ.ಅಶೋಕ್‍ ನಾಯ್ಕ್, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್, ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ದಿನೇಶ್, ಹೊಳೆಹೊನ್ನೂರಿನಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ್ ಭಂಡಾರಿ ಸೇರಿದಂತೆ ಜಿಲ್ಲೆ ವಿವಿಧೆಡೆ ಹಲವು ಪ್ರಮುಖರು ತಮ್ಮ ಹಕ್ಕು ಚಲಾಯಿಸಿದರು. 

ಸಿದ್ಧತೆ: ಪದವೀಧರ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳು ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 12 ಅಭ್ಯರ್ಥಿಗಳು ಕಣದಲ್ಲಿದ್ದರು. ಶಿಕ್ಷಕರ ಕ್ಷೇತ್ರದಲ್ಲಿ 4960 ( ಪುರುಷ - 3110 : ಮಹಿಳೆ - 1848) ಮತದಾರರಿದ್ದರು. ಪದವೀಧರ ಕ್ಷೇತ್ರದಲ್ಲಿ 27,044 (ಪುರುಷ - 16,913 : ಮಹಿಳೆ - 10,125) ಮತದಾರರಿದ್ದರು.

ಎರಡೂ ಕ್ಷೇತ್ರಗಳ ಚುನಾವಣೆಗಾಗಿ ಜಿಲ್ಲೆಯಲ್ಲಿ ಒಟ್ಟಾರೆ 74 ಮತಗಟ್ಟೆಗಳನ್ನು ತೆರೆಯಲಾಗಿತ್ತು. ಪದವೀಧರ ಕ್ಷೇತ್ರಕ್ಕೆ 42 ಹಾಗೂ ಶಿಕ್ಷಕರ ಕ್ಷೇತ್ರಕ್ಕೆ 32 ಮತಗಟ್ಟೆಗಳ ವ್ಯವಸ್ಥೆ ಮಾಡಲಾಗಿತ್ತು. ಪದವೀಧರ ಕ್ಷೇತ್ರಕ್ಕೆ ಬಿಳಿ ಬಣ್ಣದ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಗುಲಾಬಿ ಬಣ್ಣದ ಮತಪತ್ರಗಳನ್ನು ನೀಡಲಾಗಿತ್ತು. 
ಮತದಾರರು ಮತಗಟ್ಟೆಯಲ್ಲಿ ಕೊಡುವ ನೇರಳೆ ಬಣ್ಣದ ಸ್ಕೆಚ್ ಪೆನ್ನಿನಿಂದ ಅಭ್ಯರ್ಥಿಗಳ ಹೆಸರಿನ ಮುಂದಿನ ಸೂಚಿತ ಸ್ಥಳದಲ್ಲಿ 1,2,3,4,5,,, ಎಂಬ ಸಂಖ್ಯೆಗಳನ್ನು ನೀಡುವ ಮೂಲಕ ಮತ ಚಲಾಯಿಸಿದರು. ಮತದಾನದ ಬಳಿಕ ಪದವೀಧರ ಕ್ಷೇತ್ರದ ಮತದಾರರಿಗೆ ಬಲಗೈ ತೋರು ಬೆರಳಿಗೆ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರಿಗೆ ಬಲಗೈನ ಮಧ್ಯದ ಬೆರಳಿಗೆ ಶಾಯಿ ಹಾಕಲಾಯಿತು. 

ಚುನಾವಣಾ ಕಾರ್ಯಕ್ಕಾಗಿ 270 ಸಿಬ್ಬಂದಿ, 70 ವೀಕ್ಷಕರು ಹಾಗೂ 70 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಮತದಾನದ ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೋ ಚಿತ್ರೀಕರಣ ಮಾಡಲಾಯಿತು. ಮತದಾನದ ಬಳಿಕ ಮತಪೆಟ್ಟಿಗೆಗಳನ್ನು ಆಯಾ ತಾಲೂಕು ಕೇಂದ್ರದಲ್ಲಿ ದಾಸ್ತಾನಿರಿಸಿ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಗ್ರಹಿಸಿಡಲಾಗುತ್ತಿದೆ. ತದನಂತರ ಎಲ್ಲ ಮತಪೆಟ್ಟಿಗೆಗಳನ್ನು ಮೈಸೂರಿನ ವಿಭಾಗೀಯ ಆಯುಕ್ತರಿಗೆ ಕಳುಹಿಸಿ ಕೊಡಲಾಗುತ್ತಿದೆ. ಮತ ಎಣಿಕೆ ಕಾರ್ಯವೂ ಮೈಸೂರಿನಲ್ಲಿಯೇ ನಡೆಯಲಿದೆ. 

ಜಿದ್ದಾಜಿದ್ದಿನ ಅಖಾಡ!
ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಈ ಬಾರಿಯ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದೆ. ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿಯಿದ್ದರೆ, ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿಯಿದೆ. ಕಳೆದ ಹಲವು ಚುನಾವಣೆಗಳಿಂದ ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಪ್ರಾಬಲ್ಯ ಸಾಧಿಸಿಕೊಂಡು ಬರುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಪದವೀಧರ ಕ್ಷೇತ್ರ ವಶಕ್ಕೆ ಕಾಂಗ್ರೆಸ್ ಹಾಗೂ ಶಿಕ್ಷಕರ ಕ್ಷೇತ್ರ ವಶಕ್ಕೆ ಜೆಡಿಎಸ್ ಪಕ್ಷ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಬಿಜೆಪಿಗೆ ಭಾರೀ ಪೈಪೋಟಿವೊಡ್ಡಿವೆ. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X