Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೆಸ್ಸೆಸ್ ಕೇಂದ್ರ ಕಚೇರಿಗೆ ಪ್ರಣವ್...

ಆರೆಸ್ಸೆಸ್ ಕೇಂದ್ರ ಕಚೇರಿಗೆ ಪ್ರಣವ್ ಭೇಟಿ: ಅಡ್ವಾಣಿ ಪ್ರತಿಕ್ರಿಯಿಸಿದ್ದು ಹೀಗೆ…

ವಾರ್ತಾಭಾರತಿವಾರ್ತಾಭಾರತಿ8 Jun 2018 10:45 PM IST
share
ಆರೆಸ್ಸೆಸ್ ಕೇಂದ್ರ ಕಚೇರಿಗೆ ಪ್ರಣವ್ ಭೇಟಿ: ಅಡ್ವಾಣಿ ಪ್ರತಿಕ್ರಿಯಿಸಿದ್ದು ಹೀಗೆ…

ಹೊಸದಿಲ್ಲಿ, ಜೂ.8: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ನಾಗ್ಪುರದ ಆರೆಸ್ಸೆಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದು ಮತ್ತು ಭಾರತೀಯ ರಾಷ್ಟ್ರವಾದದ ಉದಾತ್ತ ಚಿಂತನೆಗಳು ಮತ್ತು ಆದರ್ಶಗಳ ಕುರಿತು ಮಾಡಿದ ಭಾಷಣ ದೇಶದ ಸಮಕಾಲೀನ ಇತಿಹಾಸದಲ್ಲಿ ಮಹತ್ವದ ಘಟನೆಯಾಗಿದೆ ಎಂದು ಹಿರಿಯ ಬಿಜೆಪಿ ನಾಯಕ ಎಲ್.ಕೆ.ಆಡ್ವಾಣಿ ಅವರು ಶುಕ್ರವಾರ ಇಲ್ಲಿ ಬಣ್ಣಿಸಿದರು.

ಸಂಘಟನೆಯ ಆಹ್ವಾನವನ್ನು ಸ್ವೀಕರಿಸಿದ್ದಕ್ಕೆ ದಶಕಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದ ಮುಖರ್ಜಿ ಮತ್ತು ಅವರನ್ನು ಆಹ್ವಾನಿಸಿದ್ದಕ್ಕೆ ಆರೆಸ್ಸೆಸ್‌ನ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಪ್ರಶಂಸಿಸಿದ ಆಡ್ವಾಣಿ,ಉಭಯ ನಾಯಕರು ವ್ಯಕ್ತಪಡಿಸಿದ ಅಭಿಪ್ರಾಯಗಳಲ್ಲಿ ಗಮನಾರ್ಹ ಹೊಂದಾಣಿಕೆಯಿತ್ತು ಎಂದು ಹೇಳಿದರು.

ಮುಖರ್ಜಿ ಮತ್ತು ಭಾಗವತ್ ವೈಚಾರಿಕ ಸಂಬದ್ಧತೆ ಮತ್ತು ಮತಭೇದಗಳನ್ನು ಮೀರಿ ಸಂವಾದದ ಉತ್ತಮ ಉದಾಹರಣೆಯನ್ನು ನಮ್ಮ ಮುಂದಿರಿಸಿದ್ದಾರೆ ಎಂದು ಆರೆಸ್ಸೆಸ್‌ನ ಆಜೀವ ಸ್ವಯಂಸೇವಕರಾಗಿರುವ ಆಡ್ವಾಣಿ ಹೇಳಿದರು.

ಧರ್ಮಗಳ ಬಹುತ್ವ ಸೇರಿದಂತೆ ಎಲ್ಲ ವೈವಿಧ್ಯತೆಗಳನ್ನು ಒಪ್ಪಿಕೊಂಡಿರುವ ಮತ್ತು ಗೌರವಿಸಿರುವ ಭಾರತದ ಏಕತೆಯ ಅಗತ್ಯವನ್ನು ಅವರಿಬ್ಬರೂ ಪ್ರಮುಖವಾಗಿ ಬಿಂಬಿಸಿದ್ದಾರೆ ಎಂದು ಆಡ್ವಾಣಿ ಹೇಳಿಕೆಯೊಂದರಲ್ಲಿ ತಿಳಿಸಿದರು.

ಭಾಗವತ್ ಅವರ ನೇತೃತ್ವದಲ್ಲಿ ಆರೆಸ್ಸೆಸ್‌ನ ವಿಸ್ತರಣೆ ಮತ್ತು ಮಾತುಕತೆಗಳ ಮೂಲಕ ರಾಷ್ಟ್ರದ ವಿವಿಧ ವರ್ಗಗಳನ್ನು ತಲುಪುವ ಅದರ ತೀವ್ರ ಪ್ರಯತ್ನಗಳ ಬಗ್ಗೆ ತನ್ನ ಹರ್ಷ ವ್ಯಕ್ತಪಡಿಸಿದ ಅವರು, ಮುಕ್ತ ಮನೋಭಾವ ಮತ್ತು ಪರಸ್ಪರ ಗೌರವಗಳೊಂದಿಗೆ ನಡೆಸುವ ಇಂತಹ ಸಂವಾದಗಳು ನಮ್ಮೆಲ್ಲರ ಕನಸಿನ ಭಾರತ ನಿರ್ಮಾಣಕ್ಕಾಗಿ ಇಂದು ಅತ್ಯಂತ ಅಗತ್ಯವಾಗಿರುವ ಸಹಿಷ್ಣುತೆ, ಸದ್ಭಾವ ಮತ್ತು ಸಹಕಾರದ ವಾತಾವರಣವನ್ನು ಸೃಷ್ಟಿಸುವಲ್ಲಿ ಖಂಡಿತವಾಗಿಯೂ ನೆರವಾಗಲಿವೆ ಎಂದರು.

ಆರೆಸ್ಸೆಸ್‌ನ ಆಹ್ವಾನವನ್ನು ಸ್ವೀಕರಿಸುವ ಮೂಲಕ ಮುಖರ್ಜಿಯವರು ತನ್ನ ಸದ್ಭಾವನೆಗಳನ್ನು ಪ್ರದರ್ಶಿಸಿದ್ದಾರೆ ಎಂದು ಪ್ರಶಂಸಿಸಿದ ಆಡ್ವಾಣಿ, ಅವರೊಂದಿಗಿನ ತನ್ನ ದೀರ್ಘಕಾಲದ ಸಂಬಂಧವನ್ನು ನೆನಪಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X