Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ:...

ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ತುಮಕೂರು ಜಿಲ್ಲೆಯಲ್ಲಿ ಶೇ87.95 ರಷ್ಟು ಮತದಾನ

ವಾರ್ತಾಭಾರತಿವಾರ್ತಾಭಾರತಿ8 Jun 2018 10:52 PM IST
share
ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ: ತುಮಕೂರು ಜಿಲ್ಲೆಯಲ್ಲಿ ಶೇ87.95 ರಷ್ಟು ಮತದಾನ

ತುಮಕೂರು,ಜೂ.08: ವಿಧಾನಪರಿಷತ್ತಿನ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಪ್ರತಿನಿಧಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಶುಕ್ರವಾರ ಮತದಾನ ನಡೆದಿದ್ದು, ಶೇ87.95 ರಷ್ಟು ಶಿಕ್ಷಕರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಜಿಲ್ಲೆಯಲ್ಲಿ 10 ತಾಲೂಕುಗಳ 6823 ಮತದಾರರಲ್ಲಿ 6001 ಮತಗಳು ಚಲಾವಣೆಯಾಗಿದ್ದು, ಇವರಲ್ಲಿ 4366 ಪುರುಷ ಮತ್ತು 1635 ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದು, ಕುಣಿಗಲ್‍ನಿಂದ ಅತಿ ಹೆಚ್ಚು ಅಂದರೆ ಶೇ 96.96ರಷ್ಟು ಮತಗಳು ಚಲಾವಣೆಯಾಗಿವೆ.

ಪಾವಗಡ ತಾಲೂಕಿನಲ್ಲಿ 654 ಮತಗಳಿಗೆ 521 ಪುರುಷ ಮತ್ತು 98 ಮಹಿಳಾ ಮತದಾರರು ಸೇರಿ 619 ಮತಗಳು ಚಲಾವಣೆಯಾಗಿದ್ದು, ಶೇ 94.65ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಮಧುಗಿರಿಯಲ್ಲಿ 429 ಮತದಾರರಿದ್ದು,317 ಪುರುಷ ಮತ್ತು 93 ಮಹಿಳಾ ಮತದಾರರು ಸೇರಿ 410 ಜನ ಮತ ಚಲಾಯಿಸಿದ್ದು, ಶೇ 95.57ರಷ್ಟು ಮತಗಳು ಚಲಾವಣೆಯಾಗಿವೆ. ಶಿರಾದಲ್ಲಿ 503 ಮತದಾರರಿದ್ದು,362 ಪುರುಷ ಮತ್ತು 104 ಮಹಿಳಾ ಮತದಾರರು ಸೇರಿದಂತೆ 466 ಮತಗಳು ಚಲಾವಣೆಯಾಗಿದ್ದು, ಶೇ92.64ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಚಿಕ್ಕನಾಯಕನಹಳ್ಳಿ 581 ಮತಗಳಿಗದ್ದು, 416 ಪುರುಷ ಮತ್ತು 113 ಮಹಿಳಾ ಮತದಾರರು ಸೇರಿ ಒಟ್ಟು 529 ಮತಗಳು ಚಲಾವಣೆಯಾಗಿದ್ದು, ಶೇ 91.05ರಷ್ಟು ಮತಗಳು ಚಲಾವಣೆಯಾಗಿವೆ. ತಿಪಟೂರಿನಲ್ಲಿ 556 ಮತಗಳಿದ್ದು,389 ಪುರುಷ ಮತ್ತು 124 ಮಹಿಳಾ ಮತದಾರರು ಸೇರಿ 513 ಮತಗಳು ಚಲಾವಣೆಯಾಗಿದ್ದು, ಶೇ92.27ರಷ್ಟು ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ.

ತುರುವೇಕೆರೆಯಲ್ಲಿ 302 ಮತದಾರರಿದ್ದು, 217 ಪುರುಷ ಮತ್ತು 74 ಮಹಿಳಾ ಮತದಾರರು ಸೇರಿ 291 ಮತಗಳು ಚಲಾವಣೆಯಾಗಿದ್ದು, ಶೇ 96.36ರಷ್ಟು ಜನ ತಮ್ಮ ಹಕ್ಕು ಚಲಾಯಿಸಿದ್ದಾರೆ. ಕುಣಿಗಲ್‍ನಲ್ಲಿ 230 ಮತಗಳಿದ್ದು, 170 ಪುರುಷ ಮತ್ತು 53 ಜನ ಮಹಿಳಾ ಮತದಾರರು ಸೇರಿ 223 ಮತಗಳು ಚಲಾವಣೆಯಾಗಿದ್ದು ಶೇ96.96ರಷ್ಟು ಮತಗಳು ಚಲಾವಣೆಯಾಗಿವೆ.

ಗುಬ್ಬಿ ತಾಲೂಕಿನಲ್ಲಿ 398ಜನ  ಮತದಾರರಿದ್ದು, 282 ಪುರುಷ ಮತ್ತು 80 ಮಹಿಳಾ ಮತದಾರರು ಸೇರಿ 362 ಜನ ಮತಚಲಾಯಿಸಿದ್ದು, ಶೇ 90.95ರಷ್ಟು ಶಿಕ್ಷಕರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ತುಮಕೂರು ನಗರದಲ್ಲಿ ಸ್ಥಾಪಸಿರುವ ಮೂರು ಮತಗಟ್ಟೆಗಳಿಂದ  ಒಟ್ಟು 2933 ಮತದಾರರಿದ್ದು, 1516 ಪುರುಷ ಮತ್ತು 858 ಮಹಿಳಾ ಮತದಾರರು ಸೇರಿದಂತೆ ಒಟ್ಟು 2374 ಜನರು ತಮ್ಮ ಹಕ್ಕು ಚಲಾಯಿಸಿದ್ದು, ಶೇ85 ರಷ್ಟು ಮತದಾನವಾಗಿದೆ. ಕೊರಟಗೆರೆ ತಾಲೂಕಿನಲ್ಲಿ 237 ಮತದಾರರಿದ್ದು, 176 ಪುರುಷ ಮತ್ತು 38 ಮಹಿಳಾ ಮತದಾರರು ಸೇರಿ ಒಟ್ಟು 214 ಜನ ಶಿಕ್ಷಕರು ತಮ್ಮ ಹಕ್ಕು ಚಲಾಯಿಸಿದ್ದು, ಶೇ 90.30ರಷ್ಟು ಮತಗಳು ಚಲಾವಣೆಯಾಗಿವೆ. 

ಚುನಾವಣೆ ಅತ್ಯಂತ ಶಾಂತಿಯುತವಾಗಿ ನಡೆದಿದ್ದು, ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿಯ ಮೂವರು ಅಭ್ಯರ್ಥಿಗಳು ಒಟ್ಟಾಗಿಯೇ ಮತಗಟ್ಟೆಗೆ ಬರುವ ಶಿಕ್ಷಕರುಗಳು ತಮಗೆ ಮತ ಚಲಾಯಿಸುವಂತೆ ಮನವಿ ಮಾಡುತ್ತಿದ್ದರು. ಮತಗಟ್ಟೆಯ ಸುತ್ತ ಬೀಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಜೂನ್ 12 ರಂದು ಬೆಂಗಳೂರಿನಲ್ಲಿ ಮತ ಎಣಿಕೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X