ಬೆಂಗಳೂರು: ಎಚ್.ವಿಶ್ವನಾಥ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು, ಜೂ. 9: ಹುಣಸೂರು ಕ್ಷೇತ್ರದ ಶಾಸಕ ಎಚ್.ವಿಶ್ವನಾಥ್‌ಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಕುರುಬರ ಒಕ್ಕೂಟದ ಕಾರ್ಯಕರ್ತರು ನಗರದ ಪುರಭವನದ ಎದುರು ಪ್ರತಿಭಟನೆ ನಡೆಸಿದರು.
ಶಾಸಕರ ನೂರಾರು ಬೆಂಬಲಿಗರು, ಕಾರ್ಯಕರ್ತರು ವಿಶ್ವನಾಥ್‌ಗೆ ಕೂಡಲೇ ಸಚಿವ ಸ್ಥಾನ ನೀಡಬೇಕು ಎಂದು ಘೋಷಣೆಗಳನ್ನು ಕೂಗಿ ಆಗ್ರಹಿಸಿದರು. ಅನುಭವಿ ರಾಜಕಾರಣಿ, ಕುರುಬ ಸಮಾಜದ ಪ್ರಭಾವಿ ನಾಯಕರಾದ ವಿಶ್ವನಾಥ್‌ಗೆ ಕೂಡಲೇ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷದ ಮೂಲಕ ಹೆಚ್ಚಿನ ಶಾಸಕರು ಗೆಲ್ಲಲು ವಿಶ್ವನಾಥ್‌ರ ಪಾತ್ರ ಅಪಾರವಾದುದಾಗಿದೆ. ಅಂತಹ ನಾಯಕರಿಗೆ ಸಚಿವ ಸ್ಥಾನ ನೀಡದೇ ಕಡೆಗಣಿಸಿರುವುದು ಸರಿಯಾದ ಕ್ರಮವಲ್ಲ. ಹೀಗಾಗಿ, ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ನಮ್ಮ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಒಕ್ಕೂಟದ ಅಧ್ಯಕ್ಷ ಕೋದಂಡರಾಮ ಪ್ರತಿಭಟನೆ ನೇತೃತ್ವ ವಹಿಸಿಕೊಂಡಿದ್ದರು.
Next Story





