ಸರಕಾರಿ ಶಾಲೆಗಳ ಸಬಲೀಕರಣ ವರದಿ ಜಾರಿಗೆ ಆಗ್ರಹಿಸಿ ಶಿಕ್ಷಣ ಸಚಿವ ಎನ್.ಮಹೇಶ್‌ಗೆ ಪತ್ರ
ಬೆಂಗಳೂರು, ಜೂ.9: ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಿ ನೆರೆಹೊರೆಯ ಸಮಾನ ಶಾಲೆಗಳನ್ನಾಗಿಸುವ ನಿಟ್ಟಿನಲ್ಲಿ ಸರಕಾರಿ ಶಾಲೆಗಳ ಸಬಲೀಕರಣ ಸಮಿತಿಯ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಲು ಕೂಡಲೇ ಕ್ರಿಯಾ ಯೋಜನೆ ತಯಾರಿಸಬೇಕೆಂದು ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ನೂತನ ಶಿಕ್ಷಣ ಸಚಿವ ಎನ್.ಮಹೇಶ್‌ಗೆ ಪತ್ರ ಬರೆದಿದೆ.
ಕಳೆದ ಒಂದೂವರೆ ದಶಕಗಳಿಂದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಿ ನೆರೆಹೊರೆಯ ಸಮಾನ ಶಾಲೆಗಳನ್ನಾಗಿಸುವ ನಿಟ್ಟಿನಲ್ಲಿ ಸತತವಾಗಿ ಹೋರಾಟ ನಡೆಯುತ್ತಾ ಬಂದಿದೆ. ಈ ಹಿಂದೆ ಹಲವು ಬಾರಿ ಸರಕಾರಿ ಶಾಲೆಗಳ ಸಬಲೀಕರಣ ಹೋರಾಟದಲ್ಲಿ ನೀವು ನಮಗೆ ಶಕ್ತಿ ತುಂಬಿದ್ದೀರಾ. ಈ ನಿಟ್ಟಿನಲ್ಲಿ ನಿಮ್ಮಲ್ಲಿ ನಾವು ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ಪತ್ರದಲ್ಲಿ ವೇದಿಕೆ ಮಹಾಪೋಷಕ ವಿ.ಪಿ. ನಿರಂಜನಾರಾಧ್ಯ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





