ಮಳೆಹಾನಿ: ಜೂ.13ಕ್ಕೆ ಮುಖ್ಯಮಂತ್ರಿ ಸಭೆ

ಬೆಂಗಳೂರು, ಜೂ. 9: ಋತುಮಾನ ಸ್ಥಿತಿ, ಮಳೆ ಹಾನಿ ಸೇರಿದಂತೆ ಇನ್ನಿತರ ಪ್ರಮುಖ ವಿಷಯಗಳಿಗೆ ಸಂಬಂಧಿಸಿದಂತೆ ಜೂ.13ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಏರ್ಪಡಿಸಲಾಗಿದೆ.
ಸರಕಾರ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿ, ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ಸಭೆ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಮುಖ್ಯಮಂತ್ರಿ, ಮಳೆಹಾನಿ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ.
Next Story





