Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇಂಗ್ಲೀಷ್‍ನಲ್ಲಿ ಪ್ರಮಾಣ ವಚನ...

ಇಂಗ್ಲೀಷ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಝಮೀರ್ ಅಹ್ಮದ್ ಖಾನ್

ವಾರ್ತಾಭಾರತಿವಾರ್ತಾಭಾರತಿ9 Jun 2018 9:09 PM IST
share
ಇಂಗ್ಲೀಷ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಝಮೀರ್ ಅಹ್ಮದ್ ಖಾನ್

ತುಮಕೂರು,ಜೂ.09: ಸಚಿವರಾಗಿ ಇಂಗ್ಲೀಷ್‍ನಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಕ್ಕೆ ನಾಡಿನ ಜನತೆಯ ಕ್ಷಮೆಯಾಚಿಸುತ್ತೇನೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಖಾತೆ ಸಚಿವ ಝಮೀರ್ ಅಹಮದ್ ಖಾನ್ ಹೇಳಿದರು.

ನಗರದ ಸಿದ್ದಗಂಗಾ ಮಠಕ್ಕೆ ಶನಿವಾರ ಭೇಟಿ ನೀಡಿ ಮಠಾಧ್ಯಕ್ಷರಾದ ಡಾ.ಶ್ರೀಶಿವಕುಮಾರ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮೊದಲು ಕನ್ನಡಿಗ, ಆಮೇಲೆ ಮುಸ್ಲಿಂ. ನಾನು ಇಂಗ್ಲೀಷ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ರಾಜ್ಯದ ಜನತೆಯ ಕ್ಷಮೆಯಾಚಿಸುತ್ತೇನೆ. ನಾನು ಓದುವಾಗ ಕಾನ್ವೆಂಟ್‍ನಲ್ಲಿ ಕನ್ನಡ ಕಡ್ಡಾಯ ಇರಲಿಲ್ಲ. ಹಾಗಾಗಿ ಕನ್ನಡ ಕಲಿಸಿರಲಿಲ್ಲ ಎಂದ ಅವರು, ಪ್ರಮಾಣ ವಚನ ಸ್ವೀಕರಿಸುವ ವೇಳೆ ಕನ್ನಡ ಓದುವಾಗ ತಪ್ಪಾಗಬಾರದು ಎಂಬ ಉದ್ದೇಶದಿಂದ ಇಂಗ್ಲೀಷ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.  

ಈ ವಿಚಾರದಲ್ಲಿ ನನಗೂ ರಾಜ್ಯದ ಜನತೆಯಷ್ಟೇ ನೋವಾಗಿದೆ. ಕನ್ನಡ ಬಂದರೂ ಇಂಗ್ಲೀಷ್‍ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರೆ ಅಂಥವರನ್ನು ದ್ರೋಹಿ ಎನ್ನುತ್ತಾರೆ. ಅಂತಹ ದ್ರೋಹಿಗಳನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಿದರೂ ತಪ್ಪಿಲ್ಲ ಎಂದರು. 

ಪಕ್ಷದ ವರಿಷ್ಠರು ನನಗೆ ನೀಡಿರುವ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಸಚಿವ ಸ್ಥಾನವನ್ನು ನಿಭಾಯಿಸಲು ಶೈಕ್ಷಣಿಕ ಅರ್ಹತೆಗಿಂತ ಅನುಭವ ಮುಖ್ಯ. ಈ ಹಿಂದೆ ರಾಷ್ಟ್ರಾಧ್ಯಕ್ಷರಾದ ಗ್ಯಾನಿ ಜೈಲ್‍ಸಿಂಗ್ ಅವರು ಓದಿದ್ದು 1ನೇ ತರಗತಿ ಮಾತ್ರ. ಅವರು ರಾಷ್ಟ್ರಪತಿಯಾಗಿರಲಿಲ್ಲವೇ ಎಂದು ಪ್ರಶ್ನಿಸಿದರು. 

ನಮ್ಮದು ಸಮ್ಮಿಶ್ರ ಸರಕಾರ. ರಾಜ್ಯದ ಸಮಸ್ಯೆ ಇದ್ದಾಗ ದೇವೇಗೌಡರ ಮಾತನ್ನು ಕೇಳುವುದರಲ್ಲಿ ತಪ್ಪೇನಿಲ್ಲ. ದೇವೇಗೌಡರು ಮಾಜಿ ಪ್ರಧಾನಿ. ಹಾಗಾಗಿ ಅವರ ಸಲಹೆ-ಸೂಚನೆ ಪಡೆಯಬಹುದಾಗಿದೆ. ಕಾಂಗ್ರೆಸ್ ಪಕ್ಷದ ಖಾತೆ ಹಂಚಿಕೆಯಲ್ಲಿ ದೇವೇಗೌಡರಾಗಲೀ, ಮುಖ್ಯಮಂತ್ರಿ ಕುಮಾರಸ್ವಾಮಿರವರಾಗಲೀ ಮೂಗು ತೂರಿಸಿಲ್ಲ. ನಮ್ಮ ಪಕ್ಷದ ವರಿಷ್ಠರು ಖಾತೆ ಹಂಚಿಕೆ ಜವಾಬ್ದಾರಿ ನಿರ್ವಹಿಸಿದ್ದಾರೆ. ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಸಚಿವರಿಗೆ ಖಾತೆ ಹಂಚಿದ್ದಾರೆ. ವಿನಾ ಕಾರಣ ಮಾಧ್ಯಮಗಳು ಅನಗತ್ಯ ಗೊಂದಲಗಳನ್ನು ಸೃಷ್ಠಿಸಬಾರದು ಎಂದರು.  

ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಅವರು 'ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ. ನನಗೆ ಮಂತ್ರಿಗಿರಿ ನೀಡಿಲ್ಲ ಎಂಬುದರ ಬಗ್ಗೆ ಬೇಸರ ಇದೆ. ಆದರೆ ಪಕ್ಷದ ಬಗ್ಗೆ ಅಲ್ಲ' ಎಂದು ಹೇಳಿದ್ದಾರೆ. ಈಗಾಗಲೇ ಪಕ್ಷದ ನಾಯಕರು ಅವರ ಮನವೊಲಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದರು. 

ರಾಜ್ಯದ ಸಮ್ಮಿಶ್ರ ಸರಕಾರ ಹೆಚ್ಚು ದಿನ ಇರುವುದಿಲ್ಲ ಎಂದು ಹೇಳಿತ್ತಿದ್ದ ಬಿಜೆಪಿಯವರು ಈಗ 6 ತಿಂಗಳು ಅಷ್ಟೇ ಸಮ್ಮಿಶ್ರ ಸರಕಾರದ ಆಯಸ್ಸು ಎನ್ನುತ್ತಿದ್ದಾರೆ. ಎಲ್ಲರೂ ರಾತ್ರಿ ವೇಳೆ ಕನಸು ಕಂಡರೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಈ ವಿಚಾರದಲ್ಲಿ ಹಗಲು ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು. 

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಬಗ್ಗೆ ನನಗೆ ಅಪಾರ ಗೌರವ ಇದೆ. 2008ರಲ್ಲಿ ಅವರು ಮುಖ್ಯಮಂತ್ರಿಯಾಗಿದ್ದಾಗ ಉಗ್ರಪ್ಪನವರು ಸದನದಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ಧ್ವನಿಯೆತ್ತಿದ್ದಾಗ ಯಡಿಯೂರಪ್ಪನವರು 'ನಾನೇನು ದುಡ್ಡು ಪ್ರಿಂಟ್ ಮಾಡುವ ಮಿಷನ್ ಇಟ್ಟಿದ್ದೇನಾ' ಎಂಬ ಉತ್ತರ ನೀಡಿದ್ದರು. ಅಂಥವರು ಇಂದು ಪದೇ ಪದೇ ರೈತರ ಸಾಲ ಮನ್ನಾ ವಿಚಾರ ಪ್ರಸ್ತಾಪ ಮಾಡುತ್ತಿದ್ದಾರೆ ಎಂದರೆ ಅದರ ಹಿಂದಿನ ಮರ್ಮವನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದರು. 

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಸ್.ಶಫಿ ಅಹಮದ್, ಡಾ.ರಫೀಕ್‍ ಅಹಮದ್, ಜಿ.ಎಸ್. ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X