Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದಲ್ಲಿ ಧೂಳು...

ಉತ್ತರ ಪ್ರದೇಶದಲ್ಲಿ ಧೂಳು ಬಿರುಗಾಳಿ,ಸಿಡಿಲಿಗೆ 26 ಜನರು ಬಲಿ: ಮುಂಬೈನಲ್ಲಿ ಮಹಾ ಮಳೆ

ವಾರ್ತಾಭಾರತಿವಾರ್ತಾಭಾರತಿ9 Jun 2018 9:51 PM IST
share
ಉತ್ತರ ಪ್ರದೇಶದಲ್ಲಿ ಧೂಳು ಬಿರುಗಾಳಿ,ಸಿಡಿಲಿಗೆ 26 ಜನರು ಬಲಿ: ಮುಂಬೈನಲ್ಲಿ ಮಹಾ ಮಳೆ

ಹೊಸದಿಲ್ಲಿ,ಜೂ.9: ಉತ್ತರ ಪ್ರದೇಶದ ವಿವಿಧೆಡೆಗಳಲ್ಲಿ ಶುಕ್ರವಾರ ಧೂಳುಮಿಶ್ರಿತ ಬಿರುಗಾಳಿ ಮತ್ತು ಸಿಡಿಲಿನ ಅಬ್ಬರಕ್ಕೆ 26 ಜನರು ಸಾವನ್ನಪ್ಪಿದ್ದರೆ,ಶನಿವಾರ ಮಹಾರಾಷ್ಟ್ರದಲ್ಲಿ ಮಳೆ ಸಂಬಂಧಿ ಅವಘಡಗಳಿಗೆ ಇಬ್ಬರು ಬಲಿಯಾಗಿದ್ದಾರೆ.

ಮುಂಬೈನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ರೈಲು ಮತ್ತು ವಾಯು ಸಂಚಾರ ವ್ಯತ್ಯಯಗೊಂಡಿದ್ದರೆ,ದಿಲ್ಲಿ ಧೂಳುಮಿಶ್ರಿತ ಬಿರುಗಾಳಿಗೆ ಸಾಕ್ಷಿಯಾಗಿತ್ತು. ದಿಲ್ಲಿ ಮತ್ತು ಸುತ್ತುಮುತ್ತಲಿನ ಪ್ರದೇಶಗಳು ಕಳೆದ ಕೆಲವು ದಿನಗಳಿಂದ ತೀವ್ರ ತಾಪಮಾನವನ್ನು ಅನುಭವಿಸುತ್ತಿವೆ.

ಪಂಜಾಬ್,ಹರ್ಯಾಣಗಳಲ್ಲಿ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಮಳೆಯಾಗಿರುವುದು ವರದಿಯಾಗಿದೆ.

ಉತ್ತರ ಪ್ರದೇಶದ 11 ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ ಧೂಳುಮಿಶ್ರಿತ ಬಿರುಗಾಳಿ ಮತ್ತು ಸಿಡಿಲಿನಿಂದಾಗಿ 21 ಜನರು ಸಾವನ್ನಪ್ಪಿದ್ದಾರೆ. ಜಾನಪುರ ಮತ್ತು ಸುಲ್ತಾನಪುರಗಳಲ್ಲಿ ತಲಾ ಐವರು,ಉನ್ನಾವೊದಲ್ಲಿ ನಾಲ್ವರು,ಚಂದೌಲಿ ಮತ್ತು ಬಹರೈಚ್‌ಗಳಲ್ಲಿ ತಲಾ ಮೂವರು,ರಾಯಬರೇಲಿಯಲ್ಲಿ ಇಬ್ಬರು ಹಾಗೂ ಮಿರ್ಝಾಪುರ,ಸೀತಾಪುರ,ಅಮೇಥಿ ಮತ್ತು ಪ್ರತಾಪಗಡಗಳಲ್ಲಿ ತಲಾ ಓರ್ವರು ಮೃತಪಟ್ಟಿದ್ದಾರೆ. ಕನೌಜ್ ಜಿಲ್ಲೆಯಲ್ಲಿ ಧೂಳುಮಿಶ್ರಿತ ಬಿರುಗಾಳಿಯಿತ್ತಾದರೂ ಯಾವುದೇ ಸಾವು ವರದಿಯಾಗಿಲ್ಲ ಎಂದು ಸರಕಾರಿ ವಕ್ತಾರರು ಶನಿವಾರ ತಿಳಿಸಿದರು.

ತನ್ಮಧ್ಯೆ ಮೃತರ ಕುಟುಂಬಗಳಿಗೆ ತಕ್ಷಣವೇ ಪರಿಹಾರವನ್ನು ಒದಗಿಸುವಂತೆ ಮುಖ್ಯಮಂತ್ರಿ ಆದಿತ್ಯನಾಥ ಅವರು ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಸಿಡಿಲು ಬಡಿದು ಮೀನುಗಾರನೋರ್ವ ಮೃತಪಟ್ಟಿದ್ದರೆ,ಇತರ ಆರು ಜನರು ಗಾಯಗೊಂಡಿದ್ದಾರೆ.

ಭಾರೀ ಮಳೆ ಸುರಿಯುತ್ತಿದ್ದ ಜಿಬಿ ರೋಡ್‌ನಲ್ಲಿ ದ್ವಿಚಕ್ರ ವಾಹನವೊಂದು ಲಾರಿಗೆ ಗುದ್ದಿದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆಯೋರ್ವಳು ಸಾವನ್ನಪ್ಪಿದ್ದಾಳೆ.

ಭಾರೀ ಮಳೆಯಿಂದಾಗಿ ಮುಂಬೈನಲ್ಲಿ ಲೋಕಲ್ ರೈಲುಗಳು ವಿಳಂಬವಾಗಿ ಸಂಚರಿಸುತ್ತಿದ್ದವು.

ದಿಲ್ಲಿಯಲ್ಲಿ ಶನಿವಾರ ಸಂಜೆ ಗಂಟೆಗೆ 70 ಕಿ.ಮೀ.ವೇಗದ ಗಾಳಿಯೊಂದಿಗೆ ಧೂಳು ಮಿಶ್ರಿತ ಬಿರುಗಾಳಿ ಅಪ್ಪಳಿಸಿದ್ದು,ತೀವ್ರ ತಾಪಮಾನದಿಂದಾಗಿ ಕಂಗೆಟ್ಟಿರುವ ಜನರಿಗೆ ಕೊಂಚ ನೆಮ್ಮದಿಯನ್ನು ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X