ಜೂ. 14: ವಿಶ್ವ ರಕ್ತದಾನಿಗಳ ದಿನಾಚರಣೆ
ಉಡುಪಿ, ಜೂ.9: ಪ್ರತಿ ವರ್ಷದಂತೆ ಈ ಬಾರಿಯೂ ವಿಶ್ವದಾದ್ಯಂತ ಜೂ.14ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೇ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ರಕ್ತದಾನಿಗಳನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಉಡುಪಿಯಲ್ಲಿ ಜೂ.14ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯ ಸಂದರ್ಭದಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುತ್ತಿರುವ ದಾನಿಗಳನ್ನು ಗುರುತಿಸಿ, ಗೌರವಿಸಿ, ಪ್ರೋತ್ಸಾಹಿಸಲು ನಿರ್ಧರಿಸಲಾಗಿದೆ. ಕನಿಷ್ಠ 10 ಬಾರಿಗೂ ಮೇಲ್ಪಟ್ಟು ರಕ್ತದಾನ ಮಾಡಿರುವ ದಾನಿಗಳು ರಕ್ತದಾನ ಮಾಡಿರುವ ಬಗ್ಗೆ ಸಂಬಂಧಪಟ್ಟ ದಾಖಲೆಗಳನ್ನು ಕಡ್ಡಾಯವಾಗಿ ಲಗತ್ತಿಸಿ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ, ರೆಡ್‌ಕ್ರಾಸ್ ಭವನ, ಅಜ್ಜರಕಾಡು, ಉಡುಪಿ - 576 101 ವಿಳಾಸಕ್ಕೆ ಜೂ.12ರೊಳಗೆ ಕಳುಹಿಸಿ ಕೊಡುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:0820-2532222ನ್ನು ಸಂಪರ್ಕಿಸುವಂತೆ ಕೋರಲಾಗಿದೆ.





