Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಶತಮಾನೋತ್ಸವದ...

ಚಿಕ್ಕಮಗಳೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಶಾಲೆ ಮುಚ್ಚಲು ಹುನ್ನಾರ; ಆರೋಪ

ಶಾಲಾ ಆಡಳಿತ ಮಂಡಳಿ ವಿರುದ್ಧ ಶಿಕ್ಷಕರು, ಪೋಷಕರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ9 Jun 2018 10:44 PM IST
share
ಚಿಕ್ಕಮಗಳೂರು: ಶತಮಾನೋತ್ಸವದ ಹೊಸ್ತಿಲಲ್ಲಿರುವ ಶಾಲೆ ಮುಚ್ಚಲು ಹುನ್ನಾರ; ಆರೋಪ

ಚಿಕ್ಕಮಗಳೂರು, ಜೂ.9: ಆಡಳಿತ ಮಂಡಳಿಯ ನಿರಂತರ ಕಿರುಕುಳದಿಂದ ತಮ್ಮನ್ನು ರಕ್ಷಿಸಬೇಕು, ಸಂಸ್ಥೆಯನ್ನು ಉಳಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ಧರಣಿಗೆ ಮುಂದಾದ ಘಟನೆ ಶತಮಾನೋತ್ಸವದ ಹೊಸ್ತಿಲಲ್ಲಿರುವ ನಗರದ ವಿಶ್ವವಿದ್ಯಾಲಯ ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆಯಿತು.

ಆಡಳಿತ ಮಂಡಳಿಯ ಪದಾಧಿಕಾರಿಗಳು ತಮ್ಮನ್ನು ಏಕವಚನ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ, ಸಂಸ್ಥೆಯನ್ನು ಮುಚ್ಚಲು ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ಶಿಕ್ಷಕರು ಮತ್ತು ಸಿಬ್ಬಂದಿ ಶುಕ್ರವಾರ ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲೀಸ್ ಮುಖ್ಯಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ದೂರು ಸಲ್ಲಿಸಿದ್ದರು, ಈ ಸಂಬಂಧ ಶನಿವಾರ ಧರಣಿಯನ್ನೂ ಹಮ್ಮಿಕೊಳ್ಳಲು ನಿರ್ಧರಿಸಿದ್ದರು.

ಈ ಹಿನ್ನೆಲೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಶನಿವಾರ ಸಂಸ್ಥೆಯ ಆವರಣದಲ್ಲಿ ಜಮಾಯಿಸಿದ್ದರು. ಬೆಳಗ್ಗೆ ಶಿಕ್ಷಕರು ಮತ್ತು ಸಿಬ್ಬಂದಿ ಧರಣಿ ನಡೆಸಲು ಮುಂದಾಗುತ್ತಿದ್ದಂತೆ ಅದನ್ನು ತಡೆದ ಆಡಳಿತ ಮಂಡಳಿ ಪದಾಧಿಕಾರಿಗಳು ಶಾಲೆಗೆ ತೆರಳಿ ಪಾಠ ಮಾಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರು, ಸಿಬ್ಬಂದಿ, ಹಳೆಯ ವಿದ್ಯಾರ್ಥಿಗಳು ಆಡಳಿತ ಮಂಡಳಿ ಹಾಗೂ ಸ್ಥಳಕ್ಕಾಗಮಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದರು.

ಶತಮಾನದ ಅಂಚಿನಲ್ಲಿರುವ ಪ್ರತಿಷ್ಠಿತ ಶಾಲೆಯನ್ನು ಮುಚ್ಚಲು ಆಡಳಿತ ಮಂಡಳಿ ಹುನ್ನಾರ ನಡೆಸುತ್ತಿದೆ. ಆಡಳಿತ ಮಂಡಳಿಯ ಪದಾಧಿಕಾರಿಗಳು ಶಾಲೆಯನ್ನು ತಮ್ಮ ಸ್ವಂತ ಆಸ್ತಿಯೆಂಬಂತೆ ವರ್ತಿಸುತ್ತಿದ್ದಾರೆ. ಬಡಮಕ್ಕಳಿಗೆ ಶಾಲೆ ಎಟುಕದಂತೆ ಸಾವಿರಾರು ರೂ. ಶುಲ್ಕವನ್ನು ಏಕಾಏಕಿ ಹೆಚ್ಚಿಸಿದ್ದಾರೆ. ಶಾಲೆಗೆ ಮಕ್ಕಳನ್ನು ಸೇರಿಸಲು ಬಂದ ಪೋಷಕರನ್ನು ಅವಮಾನಿಸಿ ಕಳುಹಿಸುತ್ತಿದ್ದಾರೆ. ಕಳೆದ 97 ವರ್ಷಗಳಿಂದ ನಗರದಲ್ಲಿ ಸಾವಿರಾರು ಬಡಮಕ್ಕಳಿಗೆ ವಿದ್ಯಾದಾನದ ಮೂಲಕ ಬದುಕನ್ನು ಕಟ್ಟಿಕೊಟ್ಟಿರುವ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಆಡಳಿತ ಮಂಡಳಿಯನ್ನು ರದ್ದುಗೊಳಿಸುವಂತೆ ಹಳೆಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ವೇಳೆ ಆಗ್ರಹಿಸಿದರು.

ಇದೇ ವೇಳೆ ಮಾಧ್ಯಮಗಳೊಂದಿಗೆ ಅಳಲು ತೋಡಿಕೊಂಡ ಶಿಕ್ಷಕಿಯರು ಹಾಗೂ ಶಿಕ್ಷಕರು, ಆಡಳಿತ ಮಂಡಳಿಯ ಪದಾಧಿಕಾರಿಗಳು ತಮ್ಮನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ. ಸದಾಕಾಲ ಶಾಲೆಯಲ್ಲೇ ಕಾಲ ಕಳೆಯುತ್ತಾ ಟೈಂ ಪಾಸ್ ಮಾಡುತ್ತಿರುವ ಪದಾಧಿಕಾರಿಗಳು ತಮಗೆ ಪಾಠ ಮಾಡಲು ಅಡ್ಡಿ ಪಡಿಸುತ್ತಿದ್ದಾರೆ. ಎಲ್ಲಾ ವಿಷಯಗಳಲ್ಲೂ ಮೂಗು ತೂರಿಸುತ್ತಿದ್ದಾರೆ. ಜಾತಿ ಹೆಸರಿನಲ್ಲಿ ತಮ್ಮನ್ನು ನಿಂದಿಸುತ್ತಿದ್ದಾರೆ. ತಮ್ಮ ಕೈಯಿಂದ ಹೋಟೆಲ್‍ಗಳಿಂದ ತಿಂಡಿ ತರಿಸುತ್ತಿದ್ದಾರೆ. ಶಿಕ್ಷಕ ಮತ್ತು ಶಿಕ್ಷಕಿಯರಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು ಜೂ.11ರಂದು ಆಡಳಿತ ಮಂಡಳಿ ಮತ್ತು ಶಿಕ್ಷಕರು ಹಾಗೂ ನೌಕರರು ಮತ್ತು ಪೋಷಕರ ಸಭೆ ಕರೆದು ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಧರಣಿಯನ್ನು ಕೈಬಿಡಲಾಯಿತು.

ಸಂಸ್ಥೆಯನ್ನು ಮುಚ್ಚಲು ಪಿತೂರಿ ನಡೆಸಿರುವ ಆಡಳಿತ ಮಂಡಳಿಯ ಪದಾಧಿಕಾರಿಗಳು ಈಗಾಗಲೇ ಶಾಲೆಯ ಬಸ್ಸನ್ನು ಮಾರಿದ್ದಾರೆ. ಸಂಸ್ಥೆಯನ್ನು ಮಾರಾಟ ಮಾಡಿ ಕ್ಲಬ್ ಮಾಡಲು ಮುಂದಾಗಿದ್ದು, ಆ ಹಿನ್ನೆಲೆಯಲ್ಲಿ ಶಾಲೆ ತೊರೆಯುವಂತೆ ತಮಗೆ ಬೆದರಿಕೆ ಹಾಕುತ್ತಿದ್ದಾರೆ. ಶುಲ್ಕವನ್ನು ಸಾವಿರಾರು ರೂ. ಏರಿಸುವ ಮೂಲಕ ಬಡಮಕ್ಕಳು ಶಾಲೆಗೆ ದಾಖಲಾಗದಂತೆ ಮಾಡಿದ್ದಾರೆ. ಇದರಿಂದಾಗಿ ಶಾಲೆಯ ದಾಖಲಾತಿ ಕುಸಿದಿದೆ ಎಂದು ಆರೋಪಿದರು.
- ಆರ್.ಶ್ರೀನಿವಾಸ್, ಶಾಲೆಯ ಮುಖ್ಯ ಶಿಕ್ಷಕ

ಶಿಕ್ಷಕರಿಂದ ಶಾಲೆಯಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿದ್ದವು. ಇದನ್ನು ಕೆಲ ಮಕ್ಕಳ ಪೋಷಕರೇ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಅಕ್ರಮಗಳು ಬೆಳಕಿಗೆ ಬಂದಿವೆ. ಅಕ್ರಮಗಳಿಗೆ ಕಡಿವಾಣ ಹಾಕಿ ಆಡಳಿತವನ್ನು ಬಿಗಿಗೊಳಿಸಿದ್ದೇವೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಈ ರೀತಿ ವರ್ತಿಸುತ್ತಿದ್ದಾರೆ. ಶಾಲೆಯನ್ನು ಮುಚ್ಚುವ ಪ್ರಸ್ತಾವ ಆಡಳಿತ ಮಂಡಲಿಯ ಮುಂದಿಲ್ಲ. ಶಿಕ್ಷಕರ ಆರೋಪ ನಿರಾಧಾರ.
-  ಕೆ.ಭವಾನಿ ಶಂಕರ್, ಆಡಳಿತ ಮಂಡಳಿಯ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X