ಕುಪ್ವಾರದಲ್ಲಿ ಐವರು ಉಗ್ರರ ಹತ್ಯೆ
ಶ್ರೀನಗರ, ಜೂ.10: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆದ ಪಡೆಗಳು ರವಿವಾರ ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಕುಪ್ವಾರ ಜಿಲ್ಲೆಯ ಕರನ್ ಸೆಕ್ಟರ್ ನ ಗಡಿ ನಿಯಂತ್ರಣಾ ರೇಖೆಯ ಬಳಿ ಉಗ್ರರು ಭಾರತದೊಳಕ್ಕೆ ನುಸುಳಲು ಯತ್ನಿಸಿದಾಗ ಭದ್ರತಾ ಪಡೆಗಳು ಗುಂಡು ಹಾರಿಸಿ ಉಗ್ರರನ್ನು ಹೊಡೆದುರುಳಿಸಿದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಕಳೆದ ಮೇ 16ರಿಂದ ಈ ತನಕ 16 ಉಗ್ರರನ್ನು ಕೊಲ್ಲಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
Next Story