ರಸ್ತೆ ಅಪಘಾತ: ಗಾಯಾಳು ಯುವಕ ಮೃತ್ಯು
ಬಂಟ್ವಾಳ, ಜೂ. 10: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅನಂತಾಡಿ ಗ್ರಾಮದ ನಿವಾಸಿ ಮೋಹನ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಮೋಹನ ಅವರು ಮಾಣಿ ಸಮೀಪ ಟಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಜೂ.8ರಂದು ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದಾಗ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಜಂಕ್ಷನ್ ಬಳಿ ಖಾಸಗಿ ಬಸ್ ಬೈಕ್‌ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು.
ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮೋಹನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story