Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಗೊರೂಚ ದತ್ತಿ ನಿಧಿ...

ಚಿಕ್ಕಮಗಳೂರು: ಗೊರೂಚ ದತ್ತಿ ನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ10 Jun 2018 11:26 PM IST
share
ಚಿಕ್ಕಮಗಳೂರು: ಗೊರೂಚ ದತ್ತಿ ನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ

ಚಿಕ್ಕಮಗಳೂರು, ಜೂ.10: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮತ್ತು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಗೊರೂಚ ದತ್ತಿ ನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ ನಗರದ ಕುವೆಂಪು ಕಲಾ ಮಂದಿರದಲ್ಲಿ ಶನಿವಾರ ನಡೆಯಿತು.

ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶರಣ ಸಾಹಿತ್ಯ ಮತ್ತು ಜಾನಪದ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಮೂವರು ಸಾಹಿತಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ನಂತರ ಆಶೀರ್ವಚನ ನೀಡಿದ ಅವರು ಮನುಷ್ಯರ ನಡುವೆ ಆತ್ಮಸಂಬಂಧ ಬೆಳೆಯಬೇಕು ಮತ್ತು ಅವು ಗಟ್ಟಿಗೊಳ್ಳಲು ದೇಶೀಯ ಸಂಸ್ಕರತಿಯನ್ನು ಪುನರುಜ್ಜೀವನಗೊಳಿಸಬೇಕಾದ ಅಗತ್ಯವಿದೆ ಎಂದರು.

ಆಧುನೀಕರಣದ ಭರದಲ್ಲಿ ದೇಶೀಯ ಆಟಗಳು ಕ್ಷೀಣಿಸುತ್ತಿರುವುದರಿಂದ ಅವುಗಳ ಉಳಿವಿಗೆ ತಮ್ಮ ಮಠ ಪ್ರಾಧಾನ್ಯತೆ ನೀಡಿದ್ದು, ತಾಂತ್ರಿಕ ಶಿಕ್ಷಣ ಸಂಸ್ಥೆಗಳೂ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಾಗಿದೆ ಎಂದು ಹೇಳಿದರು. ಶರಣರ ಬದುಕು ಅಪೂರ್ವವಾದದ್ದು, ಎಲ್ಲಿ ಮನುಷ್ಯನ ಬದುಕು ಒಂದಾಗುತ್ತದೆಯೋ ಅಲ್ಲಿ ಪ್ರೇಮಾಂಕುರವಾಗುತ್ತದೆ ಅಲ್ಲಿ ಸಮಾನತೆ ಇರುತ್ತದೆ ಎಂಬುದನ್ನು ಶರಣರು 12ನೇ ಶತಮಾನದಲ್ಲಿ ತೋರಿಸಿಕೊಟ್ಟಿದ್ದಾರೆ ಎಂದರು.

ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಡಾ.ಗೊರುಚ ಮಾತನಾಡಿ ತಮ್ಮ ತವರು ಜಿಲ್ಲೆಯಲ್ಲೇ ದತ್ತಿನಿಧಿ ಪ್ರಶಸ್ತಿ ಪ್ರಧಾನ ನಡೆದಿರುವುದು ತಮಗೆ ಸಂತಸ ತಂದಿದೆ ಎಂದು ತಿಳಿಸಿದರು. ಶರಣ ಸಾಹಿತ್ಯ ಮತ್ತು ಜಾನಪದ ಕ್ಷೇತ್ರದಲ್ಲಿ ಗಣನೀಯ ಸಾಧನೆ ಗೈದಿರುವ ಅತ್ಯುತ್ತಮ ಸಾಧಕರಿಗೆ ತಮ್ಮ ಹೆಸರಿನ ಪ್ರಶಸ್ತಿ ಸಂದಿರುವುದು ತಮಗೆ ಹೆಮ್ಮೆ ತಂದಿದೆ ಎಂದ ಅವರು ಇಂತಹವರ ಮಧ್ಯೆ ನಾವು ಇದ್ದೇವೆ ಎನ್ನುವುದೇ ನಮಗೆ ಸಮಾಧಾನ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷ ಚಂದ್ರಕಾಂತ್ ಬೆಲ್ಲದ, ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಗೊರುಚ ಅವರ ಆಶಯದಂತೆ ಕಳೆದ ಮೂರು ವರ್ಷಗಳಿಂದ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿಸಿದರು. ಗೊರುಚ ಅವರಿಗೆ 84 ವರ್ಷಗಳು ತುಂಬಿದಾಗ ಅಭಿನಂದನಾ ಸಮಾರಂಭದಲ್ಲಿ ಸಮಿತಿ ಅರ್ಪಿಸಿದ 11 ಲಕ್ಷದ ಜೊತೆಗೆ ತಮ್ಮ ಎರಡು ಲಕ್ಷ ರೂಪಾಯಿಗಳನ್ನು ಸೇರಿಸಿ ಅವರು ಪರಿಷತ್ತಿಗೆ ಕೊಡುಗೆಯಾಗಿ ನೀಡಿದ್ದು, ಆ ಹಣವನ್ನು ಪರಿಷತ್ತಿನಲ್ಲಿ ಗೊರುಚ ದತ್ತಿ ನಿಧಿಯಾಗಿ ಶಾಶ್ವತ ಠೇವಣಿ ಇಡಲಾಗಿದೆ, ಅದರಿಂದ ಬರುವ ಬಡ್ಡಿ ಹಣದಲ್ಲಿ ಪ್ರತಿವರ್ಷ ಸಂಸ್ಕೃತಿ ಮತ್ತು ಜಾನಪದ ಕ್ಷೇತ್ರಕ್ಕೆ ಗಮನಾರ್ಹ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕಿ ಡಾ.ಶಾಂತಾ ಇಮ್ರಾಪುರ ಪ್ರಶಸ್ತಿ ಪುರಸ್ಕøತರನ್ನು ಸಭೆಗೆ ಪರಿಚಯಿಸಿದರು, ಧಾರವಾಡದ ಡಾ. ಗುರುಲಿಂಗ ಕಾಪಸೆ, ಶಿವಮೊಗ್ಗದ ಡಾ.ಬಸವರಾಜ್ ನೆಲ್ಲಿಸರ, ಲಕ್ಕಸಕೊಪ್ಪದ ಪಿ.ಡಿ.ವಾಲೀಕಾರ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವೀಶ ಬಸಪ್ಪ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಬಸವರಾಜ ಸಾದರ ಅಧ್ಯಕ್ಷತೆ ವಹಿಸಿದ್ದರು. ಗೊರುಚ ಅವರ ಪುತ್ರಿ ಮುಕ್ತಾ, ಶರಣ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಶಿವಣ್ಣ ಉಪಸ್ಥಿತರಿದ್ದರು.

ಡಿ.ಎಂ.ಮಂಜುನಾಥ ಸ್ವಾಮಿ ಕಾರ್ಯಕ್ರಮವನ್ನು ನಿರೂಪಿಸಿದರು. ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ರವೀಶ್ ಬಸಪ್ಪ ಸ್ವಾಗತಿಸಿದರು. ತುಮಕೂರು ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ವಂದಿಸಿದರು. ಸಮಾರಂಭದ ನಂತರ ಗಿರಿಯಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ವೀರಗಾಸೆ ಮತ್ತು ಧಾರವಾಡದ ರತಿಕಾ ಕಲಾ ಕೇಂದ್ರದ ಕಲಾವಿದರಿಂದ ವಚನ ನೃತ್ಯ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X