ವಿದ್ಯುತ್ ಆಘಾತಕ್ಕೆ ಬಲಿಯಾದ ರೈತನ ಮನೆಗೆ ಭೇಟಿ ನೀಡಿದ ಸಿದ್ದರಾಮಯ್ಯ

ಬೆಂಗಳೂರು, ಜೂ. 11: ವಿದ್ಯುತ್ ತಂತಿ ಬಿದ್ದು ಮೃತರಾದ ಬಾದಾಮಿ ವಿಧಾನಸಭೆ ಕ್ಷೇತ್ರದ ಲಖಮಾಪುರ ಗ್ರಾಮದ ರೈತ ಸಿದ್ದಪ್ಪ ಫಕೀರಪ್ಪ ಆಲದಕಟ್ಟಿ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಕುಟುಂಬದವರಿಗೆ ವೈಯಕ್ತಿಕವಾಗಿ 50 ಸಾವಿರ ರೂ.ಗಳ ಪರಿಹಾರ ನೀಡಿದ ಸಿದ್ದರಾಮಯ್ಯ ಅವರು, ಸರ್ಕಾರದಿಂದಲೂ ಪರಿಹಾರ ದೊರಕಿಸಿಕೊಡುವುದಾಗಿ ತಿಳಿಸಿದರು. ಮೃತರ ಪತ್ನಿಗೆ ಮಾಸಾಶನ, ಮಕ್ಕಳ ವಿದ್ಯಾಭ್ಯಾಸಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಿದ್ದರಾಮಯ್ಯ ಅವರು ಸೂಚಿಸಿದರು.
Next Story





