ಜೂ.12ರಿಂದ ಮರಳು ದಿಬ್ಬ ತೆರವು ಸಂಪೂರ್ಣ ನಿಷೇಧ
ಮಂಗಳೂರು, ಜೂ.11: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದಲ್ಲಿ ಗುರುತಿಸಿರುವ ಮರಳು ದಿಬ್ಬಗಳಿಂದ ಮರಳನ್ನು ತೆರವುಗೊಳಿಸುವ ಸಂಬಂಧ ಈಗಾಗಲೇ ತಾತ್ಕಾಲಿಕ ಪರವಾನಿಗೆ ನೀಡಲಾಗಿದೆ.
ಪ್ರಸ್ತುತ ಜೂನ್ 1 ರಿಂದಲೇ ಆಳ ಮೀನುಗಾರಿಕೆಯನ್ನು ನಿಷೇಧಿಸಲಾಗಿದ್ದು, ಈ ಸಮಯದಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸುವುದರಿಂದ ಮೀನುಗಳ ಸಂತಾನೋತ್ಪತ್ತಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ಜೂ. 12 ರಿಂದ ನದಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವುದನ್ನು ಸಂಪೂರ್ಣವಾಗಿ ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ.
ನದಿಯಲ್ಲಿ ಮರಳು ದಿಬ್ಬಗಳನ್ನು ತೆರವುಗೊಳಿಸಲು ಬಳಸುವ ದೋಣಿಗಳನ್ನು ನದಿ ಹಾಗೂ ನದಿಯ ದಡವನ್ನು ಹೊರತುಪಡಿಸಿ ಮೇಲೆ ಇಡತಕ್ಕದ್ದು. ಸಿಆರ್‌ಝಡ್ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ದಿಬ್ಬ ತೆರವುಗೊಳಿಸುವುದು ಕಂಡು ಬಂದಲ್ಲಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕರ ಪ್ರಕಟನೆ ತಿಳಿಸಿದೆ.
Next Story





