ಕರಾವಳಿ ಮೀನುಗಾರರಿಗೆ ಎಚ್ಚರಿಕೆ

ಉಡುಪಿ, ಜೂ.11: ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಬಿರುಗಾಳಿ ಪಶ್ಚಿಮ ದಿಕ್ಕಿನಿಂದ ಬೀಸುವ ಸಂಭವವಿರುವುದರಿಂದ ಅರಬಿ ಸಮುದ್ರ ಪ್ರಕ್ಷುಬ್ಧವಾಗಲಿದ್ದು, ಇದರಿಂದ ಕರಾವಳಿ ಮೂರು ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಬೆಂಗಳೂರಿನ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸುಮಾರು 3.5 ರಿಂದ 4.5 ಮೀ. ಎತ್ತರದ ಅಲೆಗಳು ದಡವನ್ನು ಬಡಿಯಲಿದೆ ಎಂದೂ ಇಲಾಖೆ ತಿಳಿಸಿದ್ದು, ಮುಂದಿನ 24 ಗಂಟೆಗಳ ಕಾಲ ಮೀನುಗಾರರು ಮೀನುಗಾರಿಕೆ ತೆರಳದಂತೆ ಹೇಳಿದೆ.
ಮುಂದಿನ 24 ಗಂಟೆಗಳ ಕಾಲ ಕರಾವಳಿಯ ಮೂರು ಜಿಲ್ಲೆಗಳ ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಇದೇ ಪರಿಸ್ಥಿತಿ ಅನಂತರದ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Next Story





