Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ; ​ಜಿಲ್ಲೆಯಲ್ಲಿ ಉತ್ತಮ ಮಳೆ :...

ಮಡಿಕೇರಿ; ​ಜಿಲ್ಲೆಯಲ್ಲಿ ಉತ್ತಮ ಮಳೆ : ಭತ್ತ ಸಸಿಮಡಿ ಕಾರ್ಯಕ್ಕೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ11 Jun 2018 11:09 PM IST
share
ಮಡಿಕೇರಿ; ​ಜಿಲ್ಲೆಯಲ್ಲಿ ಉತ್ತಮ ಮಳೆ : ಭತ್ತ ಸಸಿಮಡಿ ಕಾರ್ಯಕ್ಕೆ ಸಿದ್ಧತೆ

ಮಡಿಕೇರಿ, ಜೂ.11 :ಜಿಲ್ಲೆಯಲ್ಲಿ ಮುಂಗಾರು ಸಕಾಲದಲ್ಲಿ ಆರಂಭವಾಗಿರುವುದರಿಂದ ಕೃಷಿ ಚಟುವಟಿಕೆ ಗರಿಗೆದರಿದೆ. ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಭತ್ತ ಸಸಿಮಡಿ ಮಾಡುವ ಕಾರ್ಯಕ್ಕೆ ಸಿದ್ಧತೆಗಳು ನಡೆದಿವೆ.    

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ ಹಾಗೂ ಮುಸುಕಿನ ಜೋಳದ ಬೆಳೆಗಳು ಪ್ರಮುಖವಾಗಿದ್ದು, ಈಗಾಗಲೇ ಮುಸುಕಿನ ಜೋಳ ಬಿತ್ತನೆ ಕಾರ್ಯ ಶೇ.18  ಪೂರ್ಣಗೊಂಡಿದೆ. ಸೋಮವಾರಪೇಟೆ ತಾಲ್ಲೂಕಿನ 4 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳವನ್ನು ಬಿತ್ತನೆ ಮಾಡುವ ಗುರಿ ಇದ್ದು, ಇದರಲ್ಲಿ ಈಗಾಗಲೇ 735 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಉಳಿದಂತೆ ಬಿತ್ತನೆ ಕಾರ್ಯ ಮುಂದುವರೆದಿದೆ. ಮುಸುಕಿನ ಜೋಳದ ಬಿತ್ತನೆ ಬೀಜವನ್ನು ಪ್ರತಿ ಕೆ.ಜಿ.ಗೆ 15 ರೂ.ಗಳ ಸಹಾಯಧನದಡಿ ವಿತರಣೆ ಮಾಡಲಾಗುತ್ತಿದೆ.   

ಜಿಲ್ಲೆಯಲ್ಲಿ ಈ ಬಾರಿ 30,500 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಕೃಷಿ ಮಾಡುವ ಗುರಿ ಇದ್ದು, ಸಕಾಲದಲ್ಲಿ ಮಳೆಯಾಗುತ್ತಿರುವುದರಿಂದ ಭತ್ತ ಸಸಿಮಡಿ ತಯಾರಿಗೆ ಸಿದ್ಧತೆಗಳು ನಡೆಯುತ್ತಿವೆ. ಭತ್ತದ ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರಗಳಲ್ಲ್ಲಿ ದಾಸ್ತಾನು ಮಾಡಿ 1 ಕೆ.ಜಿ.ಗೆ 8 ರೂ.ಗಳ ಸಹಾಯಧನದಡಿ ವಿತರಣೆ ಮಾಡಲಾಗುತ್ತಿದೆ.    

ರೈತರು ಸಸಿಮಡಿ ಮಾಡುವ ಸಂದರ್ಭದಲ್ಲಿ ಬಿತ್ತನೆಗೆ ಮೊದಲು ಬಿತ್ತನೆ ಬೀಜಗಳನ್ನು ಬೀಜೋಪಚಾರ ಮಾಡಿ ಉಪಯೋಗಿಸುವುದು ಸೂಕ್ತವಾಗಿದೆ. ಪ್ರತಿ ಕೆ.ಜಿ.ಭತ್ತ ಬಿತ್ತನೆ ಬೀಜಕ್ಕೆ 4 ಗ್ರಾಂ. ಬೇವಿಸ್ಟಿನ್(ಕಾರ್ಬನ್‍ಡೈಜಿಂ) ಶಿಲೀಂದ್ರನಾಶಕ ಪುಡಿಯನ್ನು ಬೆರೆಸಿ ಬೀಜೋಪಚಾರ ಮಾಡುವುದು ಸೂಕ್ತವಾಗಿದೆ. ರೈತರು ಬಿತ್ತನೆ ಬೀಜವನ್ನು ನೀರಿನಲ್ಲಿ ನೆನೆಸಿ ತೆಗೆದ ನಂತರ ಮೊಳಕೆಗೆ ಇಡುವ ಮೊದಲು ಬೀಜೋಪಚಾರ ಮಾಡುವುದು ಒಳಿತಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ  ಕೆ.ರಾಜು ಅವರು ಮಾಹಿತಿ ನೀಡಿದ್ದಾರೆ.   

ಕೊಡಗು ಜಿಲ್ಲೆಯಲ್ಲಿ ಭತ್ತದ ಬೆಳೆಗೆ ಬೆಂಕಿ ರೋಗದ ಬಾಧೆ ಹೆಚ್ಚಾಗಿ ಕಂಡುಬರುವ ಸಾಧ್ಯತೆ ಇರುವುದರಿಂದ ರೈತರು ಮುಂಜಾಗ್ರತಾ ಕ್ರಮವಾಗಿ ಬಿತ್ತನೆಗೆ ಮೊದಲು ಕಾರ್ಬನ್‍ಡೈಜಿಂ ಶಿಲೀಂಧ್ರ ನಾಶಕದಿಂದ ಬೀಜೋಪಚಾರ ಮಾಡಿ ಬಿತ್ತನೆ ಮಾಡುವುದು ಸೂಕ್ತವಾಗಿದೆ. ರೈತರು ಬಿತ್ತನೆ ಬೀಜವನ್ನು 24 ಗಂಟೆಗಳ ಕಾಲ ನೀರಿನಲ್ಲಿ ನೆನೆಸಿ ಹೊರ ತೆಗೆದ ನಂತರ ನೀರನ್ನು ಬಸಿದು ಪ್ರತಿ ಒಂದು ಕೆ.ಜಿ.ಬಿತ್ತನೆ ಬೀಜಕ್ಕೆ 4 ಗ್ರಾಂ.ನಂತೆ ಕಾರ್ಬನ್‍ಡೈಜಿಂ ಶಿಲೀಂಧ್ರ ನಾಶಕವನ್ನು ಚೆನ್ನಾಗಿ ಮಿಶ್ರಣಮಾಡಿ ನೆರಳಿನಲ್ಲಿ ಒಣಗಿಸಿ ನಂತರ ಮೊಳಕೆಗೆ ಇಟ್ಟು, ಮೊಳಕೆ ಬಂದ ನಂತರ ಸಸಿ ಮಡಿಯಲ್ಲಿ ಬಿತ್ತನೆ ಮಾಡುವುದು. ಹೀಗೆ ಮಾಡುವುದರಿಂದ ಬೀಜದಿಂದ ಬರುವ ಬೆಂಕಿ ರೋಗವನ್ನು ತಡೆಗಟ್ಟಬಹುದಾಗಿದೆ.  

ದೀರ್ಘಾವಧಿ ತಳಿಗಳಾದ ಇಂಟಾನ್, ತುಂಗಾ, ಅತಿರ, ಬಿ.ಆರ್.2655 ತಳಿ ಭತ್ತಗಳನ್ನು ಜೂನ್ 10 ರಿಂದ 20 ರೊಳಗೆ  ಬಿತ್ತನೆ ಮಾಡಬಹುದಾಗಿದೆ. ಮಧ್ಯಮಾವಧಿ ತಳಿಗಳಾದ ಐ.ಇ.ಟಿ.7191, ಜಯ, ಎಂ.ಟಿ.ಯು 1001 ತಳಿಗಳನ್ನು ಜೂನ್ ಮೂರನೇ ಅಥವಾ 4ನೇ ವಾರದಲ್ಲಿ ಬಿತ್ತನೆ ಮಾಡುವುದು. ಅಲ್ಪಾವಧಿ ತಳಿಗಳಾದ ಐ.ಆರ್.64, ಹೈಬ್ರೀಡ್ ಭತ್ತಗಳನ್ನು ಜುಲೈ ಮೊದಲನೇ ವಾರದ ನಂತರ ಬಿತ್ತನೆಗೆ ಬಳಸುವುದು ಸೂಕ್ತವಾಗಿದೆ.  

 ರಸಗೊಬ್ಬರ ದಾಸ್ತಾನು:ಜಿಲ್ಲೆಯ ಸಹಕಾರ ಸಂಘ ಹಾಗೂ ಖಾಸಗಿ ಅಂಗಡಿಗಳಲ್ಲಿ ಯೂರಿಯಾ, ಡಿ.ಎ.ಪಿ, ಎಂ.ಒ.ಪಿ, ಹಾಗೂ 17:17:17, 15:15:15, 10;26:26. ಹೀಗೆ ವಿವಿಧ ಕಾಂಪ್ಲೆಕ್ಸ್ ಗೊಬ್ಬರ ಒಟ್ಟು 14,835 ಮೆಟ್ರಿಕ್ ಟನ್ ರಸಗೊಬ್ಬರ  ದಾಸ್ತಾನು ಇದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೆಶಕರಾದ ರಾಜು ಅವರು ಮಾಹಿತಿ ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X