Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 2.50 ಲಕ್ಷ ಜನರಿಗೆ ವೃತ್ತಿ ತರಬೇತಿ:...

2.50 ಲಕ್ಷ ಜನರಿಗೆ ವೃತ್ತಿ ತರಬೇತಿ: ಆರ್.ವಿ.ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ11 Jun 2018 11:56 PM IST
share
2.50 ಲಕ್ಷ ಜನರಿಗೆ ವೃತ್ತಿ ತರಬೇತಿ: ಆರ್.ವಿ.ದೇಶಪಾಂಡೆ

ಬೆಂಗಳೂರು, ಜೂ.11: 2018-19ನೆ ಸಾಲಿನಲ್ಲಿ ನಮ್ಮ ಇಲಾಖೆ ವತಿಯಿಂದ 2.50 ಲಕ್ಷ ಜನರಿಗೆ ವೃತ್ತಿ ತರಬೇತಿ ಸಂಸ್ಥೆಗಳ ಮೂಲಕ ತರಬೇತಿಯನ್ನು ನೀಡಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾರ್ಮಿಕ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ ಸೇರಿದಂತೆ ಇನ್ನಿತರ ಇಲಾಖೆಗಳಲ್ಲಿ ತರಬೇತಿ ನೀಡುತ್ತಿದ್ದೇವೆ. ಆದರೆ, ಅದು ನಿರೀಕ್ಷಿತ ಫಲಿತಾಂಶ ನೀಡುತ್ತಿರಲಿಲ್ಲ ಎಂದರು.

ಆದುದರಿಂದ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯನ್ನು ಹೊಸದಾಗಿ 2016ರಲ್ಲಿ ಪ್ರಾರಂಭಿಸಲಾಯಿತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಮ್ಮ ಅಧಿಕಾರಾವಧಿಯಲ್ಲಿ ಈ ಇಲಾಖೆಯನ್ನು ನಿರ್ವಹಿಸುತ್ತಿದ್ದರು. ರಾಜ್ಯದಲ್ಲಿ 2014-19 ಕೈಗಾರಿಕಾ ನೀತಿ ಅನ್ವಯ 15 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯನ್ನು ಹೊಂದಲಾಗಿತ್ತು. ಆದರೂ, ಪದವೀಧರರಲ್ಲಿಯೂ ನಿರುದ್ಯೋಗ ಸಮಸ್ಯೆ ಕಂಡು ಬರುತ್ತಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸರಕಾರವು ರಾಷ್ಟ್ರಮಟ್ಟದಲ್ಲಿ ಕೌಶಲ್ಯಾಭಿವೃದ್ಧಿ ಇಲಾಖೆಯನ್ನು ಆರಂಭಿಸಿದೆ. ಯುವಕರು ತಮ್ಮ ಕಾಲಿನ ಮೇಲೆ ತಾವು ನಿಲ್ಲುವಂತಾಗಲು ಅಗತ್ಯವಿರುವ ತರಬೇತಿ ನೀಡಬೇಕಿದೆ. ಎರಡು ವರ್ಷದಲ್ಲಿ ಈ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳಾಗಿವೆ. ಇದು ಇನ್ನು ಎರಡು ವರ್ಷಗಳ ಶಿಶು ಎಂದು ಅವರು ಹೇಳಿದರು.

ಉದ್ಯೋಗಳಿಗೆ ಅಗತ್ಯವಿರುವ ಮಾನವ ಸಂಪನ್ಮೂಲ ಸಿದ್ಧಪಡಿಸುವ ದೊಡ್ಡ ಸವಾಲು ನಮ್ಮ ಮುಂದಿದೆ. ಶ್ರವಣದೋಷ, ದೃಷ್ಟಿದೋಷ ಹಾಗೂ ಮಾತು ಬಾರದ ಯುವಕರಿಗೆ ವಿಶೇಷ ಕೌಶಲ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಈ ಸಂಬಂಧ 2 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಲಾಗಿದೆ ಎಂದು ದೇಶಪಾಂಡೆ ತಿಳಿಸಿದರು.

ರಾಜ್ಯದಲ್ಲಿ 270 ಸರಕಾರದ ಐಟಿಐ ತರಬೇತಿ ಸಂಸ್ಥೆಗಳಿವೆ. ಅವುಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲಾಗಿದೆ. ಬುಡಕಟ್ಟು ಜನರು, ಅಂಗವಿಕಲರಿಗೆ ಮನೆ ಬಾಗಿಲಿಗೆ ಹೋಗಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದ ರೂಪುರೇಷೆಗಳನ್ನು ಶೀಘ್ರದಲ್ಲೆ ಸಿದ್ಧಪಡಿಸಲಾಗುವುದು. ಮೊದಲ ಹಂತದಲ್ಲಿ ಎಂಟು ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ ಎಂದು ಅವರು ತಿಳಿಸಿದರು.

2017ರ ಬಜೆಟ್‌ನಲ್ಲಿ ಕೌಶಲ್ಯಾಭಿವೃದ್ಧಿ ಅಕಾಡಮಿ ಸ್ಥಾಪಿಸುವುದಾಗಿ ಘೋಷಿಸಲಾಗಿತ್ತು. ಕೆಂಗೇರಿ ಬಳಿ 14 ಎಕರೆ ಹಾಗೂ ದೊಡ್ಡಬಳ್ಳಾಪುರ ಬಳಿ 20 ಎಕರೆ ಭೂಮಿ ಲಭ್ಯವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಿ, ಅನುಮೋದನೆ ಪಡೆದು ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದೇಶಪಾಂಡೆ ಹೇಳಿದರು.

ವಿದೇಶಗಳಲ್ಲಿ ಉದ್ಯೋಗ ಮತ್ತು ಜೀವನೋಪಾಯವನ್ನು ಹೊಂದಲು ಹಾಗೂ ರಾಜ್ಯವನ್ನು ವಿದೇಶಿ ಉದ್ಯೋಗಕ್ಕೆ ಆದ್ಯತಾ ರಾಜ್ಯವನ್ನಾಗಿ ರೂಪಿಸಲು ಅಂತಾರಾಷ್ಟ್ರೀಯ ವಲಸೆ ಕೇಂದ್ರವನ್ನು ಸ್ಥಾಪಿಸುವುದರ ಮೂಲಕ ರಾಜ್ಯದ ಯುವ ಜನತೆಗೆ ಅಗತ್ಯ ತರಬೇತಿ ಮತ್ತು ಪ್ರೋತ್ಸಾಹ ನೀಡುವ ಚಿಂತನೆಯೂ ನಮ್ಮ ಮುಂದಿದೆ ಎಂದು ಅವರು ತಿಳಿಸಿದರು.

ರಾಜ್ಯ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್)ವು 2017-18ನೆ ಸಾಲಿನಲ್ಲಿ ಯುಎನ್‌ಡಿಪಿ ಸಹಯೋಗದೊಂದಿಗೆ 16 ಜಿಲ್ಲೆಗಳಲ್ಲಿ ಸಂಭಾವ್ಯ ಉದ್ದಿಮೆದಾರರಿಗೆ ತರಬೇತಿ ನೀಡಲು ದಿಶಾ ಯೋಜನೆಯನ್ನು ಜಾರಿಗೊಳಿಸಿದ್ದು, ಯೋಜನೆಯಡಿ 32 ಸಾವಿರ ಜನರಿಗೆ ಪ್ರಯೋಜನವನ್ನು ನೀಡಲಾಗುವುದು ಎಂದು ಅವರು ಹೇಳಿದರು.

2018-19ನೆ ಸಾಲಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಿ 2 ಕೋಟಿ ರೂ.ಅನುದಾನದಲ್ಲಿ 1 ಲಕ್ಷ ಜನರಿಗೆ ಈ ಯೋಜನೆಯ ಪ್ರಯೋಜನವನ್ನು ಒದಗಿಸಲಾಗುವುದು. ದೀನ್‌ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ದೀನ್‌ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ(ಡೇ-ನಲ್ಮ್)ವನ್ನು ಕೇಂದ್ರ ಹಾಗೂ ರಾಜ್ಯ ಸರಕಾರದ ಶೇ.60/ಶೇ.40ರಷ್ಟು ಅನುದಾನ ಹಂಚಿಕೆ ಆಧಾರದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X