Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಜೂ.17 ರಂದು ಕೋಮುವಾದಿ ಶಕ್ತಿ...

ಬೆಂಗಳೂರು: ಜೂ.17 ರಂದು ಕೋಮುವಾದಿ ಶಕ್ತಿ ವಿರೋಧಿ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ12 Jun 2018 6:30 PM IST
share

ಬೆಂಗಳೂರು, ಜೂ.12: ಬುದ್ಧ, ಬಸವ ಹಾಗೂ ಅಂಬೇಡ್ಕರ್ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಜಾತಿವಾದಿ, ಕೋಮುವಾದಿ ಶಕ್ತಿ ವಿರೋಧಿ ದಿನವನ್ನು ಜೂ.17 ರಂದು ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ, ಇತ್ತೀಚಿನ ದಿನಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶ ಮಾಡಲು ಕೋಮುವಾದಿ ಶಕ್ತಿಗಳು ಪ್ರಯತ್ನ ಪಡುತ್ತಿವೆ. ಮತ್ತೊಂದು ಕಡೆ ಜಾತಿಯ ಹೆಸರಿನಲ್ಲಿ ದಲಿತರು, ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸಮುದಾಯವನ್ನು ಜಾಗೃತಿಗೊಳಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಉತ್ತರ ಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಮದ್ಯಪ್ರದೇಶ, ಅಸ್ಸಾಂ ಸೇರಿದಂತೆ ದೇಶದಾದ್ಯಂತ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ನಿರಂತರ ದಬ್ಬಾಳಿಕೆ, ದೌರ್ಜನ್ಯಗಳು ಹೆಚ್ಚಾಗುತ್ತಿವೆ. ದಲಿತ, ಆದಿವಾಸಿ ಮಹಿಳೆಯರ ಮೇಲೆ ಬಲಾತ್ಕಾರ ಪ್ರಕರಣಗಳು ಅಧಿಕವಾಗಿವೆ. ಮತ್ತೊಂದು ಕಡೆ ಸಂವಿಧಾನ ಬದಲಾವಣೆ ಮಾಡುವ ಸಲುವಾಗಿ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವ ಹೇಳಿಕೆ ನೀಡುವ ಮೂಲಕ ಸಂವಿಧಾನವನ್ನು ನಾಶ ಮಾಡಲು ಮುಂದಾಗಿದ್ದಾರೆ ಎಂದರು.

ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ನಿರ್ನಾಮ ಮಾಡುವ ವ್ಯವಸ್ಥಿತ ಪಿತೂರಿ ನಡೆಸಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಕಾಯ್ದೆಯನ್ನು ದುರ್ಬಲ ಮಾಡಿ, ಶೋಷಿತರನ್ನು, ದಮನಿತರನ್ನು ಹತ್ತಿಕ್ಕಲು ಮುಂದಾಗಿದ್ದಾರೆ. ಇದರ ನಡುವೆ ಶೋಷಿತರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಶೋಷಿತರಲ್ಲಿ ಶಕ್ತಿ ತುಂಬುವ ಸಲುವಾಗಿ ಕೋಮುವಾದಿ ಶಕ್ತಿ ವಿರೋಧಿ ದಿನಾಚರಣೆ ಅತ್ಯಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ವಿಚಾರವಾದಿ ಪ್ರೊ.ಜಿ.ಕೆ.ಗೋವಿಂದರಾವ್ ಉದ್ಘಾಟಿಸಲಿದ್ದು, ಅಂಕಣಕಾರ ನಟರಾಜ್ ಹುಳಿಯಾರ್, ಸಮಿತಿ ಮುಖಂಡರಾದ ಜೀವನಹಳ್ಳಿ ಆರ್. ವೆಂಕಟೇಶ್, ನಾರಾಯಣಪ್ಪ, ಚಿಂತಕ ರುದ್ರಪ್ಪ ಹನಗವಾಡಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X