ಮೂಡಿಗೆರೆ: ಗುತ್ತಿಹಳ್ಳಿ-ಮೂಲರಹಳ್ಳಿ ಸಂಪರ್ಕ ರಸ್ತೆ ಬಂದ್; ಜನರ ಪರದಾಟ

ಮೂಡಿಗೆರೆ, ಜೂ.13: ತಾಲೂಕು ವ್ಯಾಪ್ತಿಯಲ್ಲಿ ಕಳೆದ ಮೂರು ದಿನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಗುತ್ತಿಹಳ್ಳಿಯಿಂದ ಮೂಲರಹಳ್ಳಿ ಸಂಪರ್ಕ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡು ಸ್ಥಳೀಯ ಜನರು ಪರದಾಡುವಂತಾಗಿದೆ.
ತಾಲೂಕಿನ ಮೂಲರಹಳ್ಳಿ ಸಂಪರ್ಕ ರಸ್ತೆಯಲ್ಲಿ ಜೂ.12ರಂದು ಬೆಳಿಗ್ಗೆ ಗುಡ್ಡ ಕುಸಿದು ರಸ್ತೆಗೆ ಬಿದ್ದಿದ್ದು, ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಚಾರ್ಮಾಡಿ ಘಾಟ್ ರಸ್ತೆ ಬಂದ್ ತೆರವು ಕಾರ್ಯಾಚರಣೆಯಲ್ಲಿ ಅಧಿಕಾರಿಗಳೆಲ್ಲಾ ಅತ್ತ ತೆರಳಿದರೆ, ಇತ್ತ ಯಾವ ಅಧಿಕಾರಿಯೂ ಸ್ಥಳಕ್ಕೆ ಧಾವಿಸದೆ ತೆರವು ಕಾರ್ಯ ನಡೆಸದೇ ಇರುವುದರಿಂದ ಸ್ಥಳೀಯ ರೈತರು ಹಾಗೂ ಶಾಲೆಗೆ ಹೋಗುವ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂಬ ಅರೋಪ ಕೇಳಿಬಂದಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಗುತ್ತಿಹಳ್ಳಿ ಮತ್ತು ಮೂಲರಹಳ್ಳಿ ಸಂಪರ್ಕ ರಸ್ತೆಯನ್ನು ಸರಿಪಡಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
Next Story





